ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಮೈಸೂರು

ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

July 9, 2018

ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ.35,000-00ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ A4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ.

ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸ ಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿ ರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರ್ಯಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002-ಈ ವಿಳಾಸಕ್ಕೆ 21.07.2018ರ ಒಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ವೆಬ್‍ಸೈಟ್: www.kannada pustakapradhikara @gmail.com ದೂ.ಸಂ.080-22484516 / 22017704 ಇಲ್ಲಿ ಸಂಪರ್ಕಿಸಬಹುದು

Translate »