ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
ಮೈಸೂರು

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

June 28, 2018

ಮೈಸೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ 2018-19 ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3 ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಪ್ರವರ್ಗ-1 ಪ.ಜಾ/ಪ.ವರ್ಗ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ 2.50 ಲಕ್ಷದೊಳಗಿರಬೇಕು, ಪ್ರವರ್ಗ2ಎ, 2ಬಿ, 3ಎ, 3 ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಜನಾಂಗಗಳ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ 1 ಲಕ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ www.backwardclasses.kar.nic.in ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಯಾದಲ್ಲಿ ಇ-ಮೇಲ್ ವಿಳಾಸ bcw. [email protected] ಅಥವಾ ಸಹಾಯವಾಣಿ 080-8050370006 ಅನ್ನು ಸಂಪರ್ಕಿಸುವುದು ಎಂದು ಮೈಸೂರು ತಾಲ್ಲೂಕು ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »