ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ: ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ 35 ಸಾವಿರ ರೂ. ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ.ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಠ 200 ಪುಟ ಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧ ಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿ ಗಳನ್ನು ಹಸ್ತಪ್ರತಿಗಳನ್ನು ಹಿಂದಿರು ಗಿಸಲಾಗುವುದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಜುಲೈ 21 ರೊಳಗೆ ಅರ್ಜಿ ಸಲ್ಲಿ ಸುವುದು. ಹೆಚ್ಚಿನ ಮಾಹಿತಿಗೆ ಆಡ ಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿ ಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-ವೆಬ್ ಸೈಟ್ www.kannadapustakapradhikara.com ದೂ.ಸಂ.080-22484516/ 22017704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ತಿಳಿಸಿದ್ದಾರೆ.