ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

July 27, 2018

ಮೈಸೂರು:  ಕರ್ನಾಟಕ ರಾಜ್ಯ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘವು 2018-19ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಆ.5ರಂದು ಬೆಳಿಗ್ಗೆ 10.30 ಗಂಟೆಗೆ ಪ್ರತಿಭಾ ಪುರ ಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅಂಕಪಟ್ಟಿಯ ನಕಲು, ಆದಾಯ ಪ್ರಮಾಣ ಪತ್ರದೊಂದಿಗೆ ಜು.29ರೊಳಗೆ ನೇಗಿಲಯೋಗಿ ಮರುಳೇಶ್ವರ ಸೇವಾ ಭವನ, ಆದಿಚುಂಚನಗಿರಿ ರಸ್ತೆ, 3ನೇ ಎಡ ತಿರುವು, ಹೊಸ ಕೋರ್ಟ್ ಎದುರು, ಜಯನಗರ ಇಲ್ಲಿ ಬೆಳಿಗ್ಗೆ 11ರಿಂದ ಸಂಜೆ 6ರವರೆಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಮೊ. 9164866398, 9980459596 ಅನ್ನು ಸಂಪರ್ಕಿಸಬಹುದು.

Translate »