ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರು

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

May 31, 2018

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮಾದಾಪುರ, ಸರಗೂರು, ಮುಳ್ಳೂರು, ಮನಗನಹಳ್ಳಿ, ಹೆಚ್.ಡಿ.ಕೋಟೆ ಟೌನ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹೆಚ್.ಡಿ.ಕೋಟೆ ಟೌನ್‍ನಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 2(ಬಿ), 3(ಎ) ಮತ್ತು 3(ಬಿ), ಪರಿ ಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿ ವರ್ಗಗಳಿಗೆ ಸೇರಿದ್ದು, 5ನೇ ತರಗತಿ ಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರಬೇಕು. ಪ್ರವರ್ಗ-2(ಎ), 2(ಬಿ), 3(ಎ) ಮತ್ತು 3(ಬಿ), ವಿದ್ಯಾರ್ಥಿಗಳ ವಾರ್ಷಿಕ ವರಮಾನ ರೂ.44500/- ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರೂ.100000/- ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಾರ್ಷಿಕ ವರಮಾನವು ರೂ. 200000/- ಒಳಗಿರಬೇಕು. ವಿದ್ಯಾರ್ಥಿನಿಲಯಗಳಿಗೆ ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ಉಚಿತವಾಗಿ ಉಪಹಾರ, ಊಟ, ಪಠ್ಯ ಪುಸ್ತಕ, ನೋಟ್ ಪುಸ್ತಕ, ಸಮವಸ್ತ್ರ, ಹಾಸಿಗೆ, ಹೊದಿಕೆ, ತಟ್ಟೆ, ಲೋಟ, ಮೈಸೋಪು ಮತ್ತು ಬಟ್ಟೆ ಸೋಪು, ಟೂತ್‍ಪೇಸ್ಟ್ ಮತ್ತು ಬ್ರಶ್, ಕೊಬ್ಬರಿಎಣ್ಣೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುವುದು.

ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರು ಅಥವಾ ಹೆಚ್.ಡಿ.ಕೋಟೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಇವರಿಂದ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜೂ.20ರೊಳಗೆ ಸಲ್ಲಿಸುವುದು ಎಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »