ಪ್ರಾಥಮಿಕ ಶಾಲೆಗಳಿಗೆ ಇಂಗ್ಲಿಷ್ ಶಿಕ್ಷಕರ ನೇಮಕ
ಮೈಸೂರು

ಪ್ರಾಥಮಿಕ ಶಾಲೆಗಳಿಗೆ ಇಂಗ್ಲಿಷ್ ಶಿಕ್ಷಕರ ನೇಮಕ

September 12, 2018

ಮೈಸೂರು: ಖಾಸಗಿ ಶಾಲೆಯಲ್ಲಿ ಶ್ರೀಮಂತರ ಮಕ್ಕಳ ನಡುವೆ ಗ್ರಾಮೀಣ ಪ್ರದೇಶದ ಮಕ್ಕಳು ಇಂಗ್ಲಿಷ್ ಕಲಿಯುವ ಕೊರತೆ ಅನುಭವಿಸುತ್ತಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಮಕ್ಕಳಿಗೆ ಬೋಧಿಸಲು ಒಂದು ಸಾವಿರ ಇಂಗ್ಲಿಷ್ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.

ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವ ಹಣಾ ಕಾಲೇಜಿನ 2018-19ನೇ ಸಾಲಿನ ಸಾಂಸ್ಕøತಿಕ, ಕ್ರೀಡೆ, ಎನ್‍ಸಿಸಿ, ಎನ್‍ಎಸ್‍ಎಸ್ ಅನಾವರಣ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ರೆಡ್‍ಕ್ರಾಸ್ ಚಟುವಟಿಕೆಗಳ ಉದ್ಘಾಟಿಸಿ ಮಾತನಾಡಿದರು.

ನಮ್ಮ ಕನ್ನಡ ಭಾಷೆ ಉಳಿಸುವ ಜೊತೆಗೆ, ಮಕ್ಕಳ ಜೀವನ ಶೈಲಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಇಂಗ್ಲಿಷ್ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ ಎಂದು ಹೇಳಿದರು. ಕಾಲೇಜಿಗೆ ಅಗತ್ಯವಿರುವ ಕೊಠಡಿಗಳು ಮತ್ತು ಅದ್ಯಾಪಕರ ಕೊರತೆ ಜೊತೆಗೆ ಕಾಲೇಜಿನ ಎಲ್ಲಾ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಲು ಉನ್ನತ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಅದಷ್ಟು ಶೀಘ್ರದಲ್ಲಿ ಅಧ್ಯಾಪಕರ ಕೊರತೆ, ಹೊಸದಾಗಿ ಅಧ್ಯಾ ಪಕರ ನೇಮಕ ಮಾಡಲಾಗುವುದು ಎಂದರು. ಸರ್ಕಾರಿ ಶಾಲಾ, ಕಾಲೇಜು ಕಟ್ಟಡಗಳ ನಿರ್ಮಾಣ, ಮೂಲ ಸೌಕರ್ಯಗಳ ಅಭಿ ವೃದ್ದಿ ಹಾಗೂ ದುರಸ್ತಿಗಾಗಿ ಒಂದು ಸಾವಿರ ಕೋಟಿ ರೂ.ಗಳನ್ನು ನೀಡಿರುವುದಾಗಿಯೂ ಸಿಎಂ ತಿಳಿಸಿದರು.

ಶೇ.100 ಫಲಿತಾಂಶಕ್ಕೆ ಸಲಹೆ: ಶಿಕ್ಷಣದಲ್ಲಿ ಶೇ100ರಷ್ಟು ಫಲಿತಾಂಶ ನೀಡುವ ಮೂಲಕ ಕಾಲೇಜಿಗೆ ಉತ್ತಮ ಹೆಸರು ತರಬೇಕು. ಖಾಸಗಿ ಕಾಲೇಜುಗಳಲ್ಲಿ ದೊರೆಯುವಂತಹ ಶಿಕ್ಷಣ ನಮ್ಮ ಸರ್ಕಾರಿ ಕಾಲೇಜುಗಳಲ್ಲಿ ದೊರೆಯುತ್ತಿದೆ ಎಂಬ ಭಾವನೆ ಬರುವ ರೀತಿಯಲ್ಲಿ ನಿಮ್ಮ ಸಹಕಾರ ಬೇಕಾಗಿದೆ ಎಂದು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಗುಣಾತ್ಮಕ ಶಿಕ್ಷಣಕ್ಕೆ ನಿರ್ಧಾರ: ಸರ್ಕಾರಿ ಶಾಲೆಗಳ ಗುಣಾತ್ಮಕ ಶಿಕ್ಷಣ ಮತ್ತು ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾರಂಭಿಕ ಹಂತದಲ್ಲಿ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಶಾಲೆಗಳನ್ನು ದತ್ತು ತೆಗೆದುಕೊಂಡು ಖಾಸಗಿ ಶಾಲೆಗಳಲ್ಲಿರುವ ಕಟ್ಟಡ, ಗುಣಾತ್ಮಕ ಶಿಕ್ಷಣದ ರೀತಿಯಲ್ಲಿಯೇ ಸರ್ಕಾರಿ ಶಾಲೆಗಳಲ್ಲೂ ಉತ್ತಮ ಕಟ್ಟಡ, ಗುಣಾತ್ಮಕ ಶಿಕ್ಷಣ ದೊರಕುವಂತೆ ಮಾಡಲು ಅಂತಾರಾಷ್ಟ್ರೀಯ ಕಂಪನಿ ಜೊತೆಗೆ ಚರ್ಚೆ ಮಾಡಲಾಗಿದೆ ಎಂದರು.

ಶಿಕ್ಷಕರ ದಿನದಂದು ಡಾ.ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ರ್ಪಾಚನೆ ಮಾಡಿದರೆ ಅರ್ಥ ಕೊಡುವುದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಶಿಕ್ಷಕರ ಅತ್ಯುತ್ತಮ ಸೇವೆಯಿಂದ ಮಕ್ಕಳು ಕೂಡ ಅವರ ನಡವಳಿಕೆ ಕಲಿಯುವಂತಾಗಬೇಕು. ಶಿಕ್ಷಕರ ಸಮಸ್ಯೆಯನ್ನೂ ಬಗೆಹರಿಸಲು ಸರ್ಕಾರ ಬದ್ಧತೆ ಹೊಂದಿದೆ ಎಂದು ಹೇಳಿದರು. ಚಾಮರಾಜ ಕ್ಷೇತ್ರ ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಚಿವ ಸಾ.ರಾ.ಮಹೇಶ್, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನಾ, ಕವಯತ್ರಿ ಲತಾ ರಾಜಶೇಖರ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಕಾಲೇಜಿನ ಪ್ರಾಂಶುಪಾಲ ಅಣ್ಣೇಗೌಡ ಇನ್ನಿತರರು ಉಪಸ್ಥಿತರಿದ್ದರು.

ಅಣ್ಣನೋ… ತಮ್ಮನೋ ಎಂಬ ಭಾವನೆ ನಿಮ್ಮದು

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಷಣ ಮಾಡುವಾಗ ತುಂತುರು ಮಳೆ ಪ್ರಾರಂಭವಾಗಿ, ಶಾಮಿಯಾನದಿಂದ ನೀರು ತೊಟ್ಟಿಕ್ಕುತ್ತಿದ್ದರೂ ವಿದ್ಯಾರ್ಥಿನಿಯರು ಕದಲದೆ ಸಿಎಂ ಭಾಷಣ ಆಲಿಸಿದರು. ಮಳೆ ಬಂದರೂ ಭಾಷಣ ಮುಂದು ವರಿಸುವಂತೆ ಕಾಲೇಜು ಪ್ರಾಂಶುಪಾಲರು ಮತ್ತು ವಿದ್ಯಾರ್ಥಿನಿಯರು ಕೋರಿದಾಗ ಸಿಎಂ ಮತ್ತೆ 10 ನಿಮಿಷ ತಮ್ಮ ಭಾಷಣ ಮುಂದುವರಿಸಿದರು.

ಮಳೆಯ ನಡುವೆಯೂ ಭಾಷಣ ಆಲಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಇನ್ನೊಬ್ಬ ಸಿಎಂ ಆಗಿದ್ದಿದ್ದರೆ ಮಳೆ ಬಂತು ಎಂದು ಓಡಿ ಹೋಗುತ್ತಿದ್ದೀರಿ. ಆದರೆ ನನನ್ನು ಸಿಎಂಗಿಂತ ಹೆಚ್ಚಾಗಿ ನಿಮ್ಮ ಅಣ್ಣನೋ, ತಮ್ಮನೋ ಎಂಬ ಭಾವನೆಯನ್ನು ವ್ಯಕ್ತಪಡಿಸಿದ್ದೀರಿ ಎಂದು ಕುಮಾರಸ್ವಾಮಿ ಹೇಳಿದಾಗ ವಿದ್ಯಾರ್ಥಿನಿಯರು ಹೋ… ಎಂದು ಕೂಗಿ ಕರತಾಡನದ ಮೂಲಕ ಪ್ರತಿಕ್ರಿಯಿಸಿದರು.

Translate »