ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ
ಚಾಮರಾಜನಗರ

ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ

April 27, 2018

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕರ್ತವ್ಯ ನಿರ್ವಹಿಸಲು ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ.

ಅಂಚೆ ಮತಪತ್ರಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಾಗಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಮಹೇಶ್ ಕುಮಾರ್ ಎಸ್.ಎಲ್. ಅವರನ್ನು ನೇಮಕ ಮಾಡಲಾಗಿದ್ದು ಅವರ ಮೊಬೈಲ್ ಸಂಖ್ಯೆ 9945629106 ಆಗಿದೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಯಾಗಿ ಶ್ರೀಕಾಂತ್ ಮಂಜುನಾಥ ಹೆಗಡೆ ಅವರನ್ನು ನೇಮಕ ಮಾಡಿದ್ದು ಅವರ ಮೊಬೈಲ್ ಸಂಖ್ಯೆ 9901220861 ಆಗಿದೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಯಾಗಿ ಸುಂದರ್ ಅವರು ನೇಮಕಗೊಂಡಿದ್ದು, ಅವರ ಮೊಬೈಲ್ ಸಂಖ್ಯೆ 9972720386 ಆಗಿದೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಯಾಗಿ ಅಜೇತರವಿ ಅವರನ್ನು ನೇಮಕ ಮಾಡಲಾಗಿದ್ದು, ಅವರ ಮೊಬೈಲ್ ಸಂಖ್ಯೆ 9448401941 ಆಗಿದೆ.
ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂಚೆ ಮತಪತ್ರ ಸೌಲಭ್ಯ ಕೇಂದ್ರ ತೆರೆಯಲಾಗಿದ್ದು, ನಮೂನೆ 12ರನ್ನು ಚುನಾವಣಾ ಕರ್ತವ್ಯನಿರತ ಅಧಿಕಾರಿ ಸಿಬ್ಬಂದಿಗಳು ಪಡೆದುಕೊಳ್ಳಬೇಕು. ತಮ್ಮ ವಿಧಾನಸಭಾ ಕ್ಷೇತ್ರದ ಭಾಗದ ಸಂಖ್ಯೆ, ಕ್ರಮ ಸಂಖ್ಯೆಯನ್ನು ಪಡೆಯಬಹುದು. ಅಲ್ಲದೆ 9731979899 ನಂಬರಿಗೆ ಏಂಇPIಅ(sಠಿಚಿಛಿe) ಮತದಾರರ ಗುರುತಿನ ಚೀಟಿಯ ಸಂಖ್ಯೆ (ಎಪಿಕ್) ನಮೂದಿಸಿ ಎಸ್ ಎಂ ಎಸ್ ಮಾಡಿಯೂ ಮಾಹಿತಿ ಪಡೆಯಬಹುದು.

ಇಂಟರ್‍ನೆಟ್ ಮೂಲಕ http://electoralsearch.in ಟೈಪ್ ಮಾಡಿ search by EPIC Number Option Click ಮಾಡಿಯೂ ಮಾಹಿತಿ ಪಡೆಯಬಹುದು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ಕೋರಿದ್ದಾರೆ.

Translate »