ನಾಳೆ ಅಪ್ಪನ ಸಮಾಧಿ ಪಕ್ಕ ಅಪ್ಪು ಅಂತ್ಯಕ್ರಿಯೆ
ಮೈಸೂರು

ನಾಳೆ ಅಪ್ಪನ ಸಮಾಧಿ ಪಕ್ಕ ಅಪ್ಪು ಅಂತ್ಯಕ್ರಿಯೆ

October 30, 2021

ಅಮೆರಿಕಾದಿAದ ಬೆಂಗಳೂರು ಕಡೆ ಹೊರಟ ಪುನೀತ್ ರಾಜ್‌ಕುಮಾರ್ ಮಗಳು
ಬೆಂಗಳೂರು: ನಗರದ ಕಂಠೀರವ ಸ್ಟುಡಿಯೋ ದಲ್ಲಿ ತಂದೆ-ತಾಯಿಯ ಸಮಾಧಿ ಪಕ್ಕದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಲಿದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್‌ಕುಮಾರ್ ಅವರ ಅಂತ್ಯ ಸಂಸ್ಕಾರ ವನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ಸರ್ಕಾರದ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಆದ ಕಾರಣ, ಡಾ.ರಾಜ್‌ಕುಮಾರ್ ಪ್ರತಿಷ್ಠಾ ನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್ ರಾಜ್‌ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ಅನುಕೂಲವಾಗುವಂತೆ ಅನುಮತಿ ನೀಡಿ ಸರ್ಕಾರಿ ಆದೇಶ ಹೊರಡಿಸಲು ಕೋರಿರು ತ್ತಾರೆ. ಇದಕ್ಕೆ ಅನುಕೂಲವಾಗುವಂತೆ ಅನುಮತಿ ನೀಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಎನ್.ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ
ನಿಧನರಾದ ಹಿನ್ನೆಲೆಯಲ್ಲಿ ಅವರ ಮಗಳು ಬೆಂಗಳೂರಿನ ಕಡೆಗೆ ಹೊರಟಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪವರ್ ಸ್ಟಾರ್ ಪುತ್ರಿ ಆಗಮಿಸುತ್ತಿದ್ದಾರೆ. ನಾಳೆ ಸಾಯಂಕಾಲ ೪ ಗಂಟೆ ವೇಳೆಗೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ಒಂದು ವೇಳೆ ಪುನೀತ್ ಅವರ ಪುತ್ರಿ ೪ ಗಂಟೆಗೆ ಬಂದರೆ ನಾಳೆಯೇ ಅಂತ್ಯಕ್ರಿಯೆ ಮಾಡುವ ಸಾಧ್ಯತೆಯೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

Translate »