ಸಂಗೊಳ್ಳಿ ರಾಯಣ್ಣ ಪ್ರತಿಮೆ ಪುನರ್ ಪ್ರತಿಷ್ಠಾಪನೆ
News

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪುನರ್ ಪ್ರತಿಷ್ಠಾಪನೆ

December 20, 2021

ಬೆಳಗಾವಿ,ಡಿ.19-ಎಂಇಎಸ್ ಪುಂಡರು ಶನಿವಾರ ಮುಂಜಾನೆ ಧ್ವಂಸಗೊಳಿಸಿದ್ದ ಸ್ಥಳದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಾನುವಾರ ಪುನರ್ ಪ್ರತಿ ಷ್ಠಾಪಿಸಲಾಗಿದೆ. ಇಲ್ಲಿನ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಿರ್ಮಿಸಲಾಗಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಶನಿವಾರ ಮುಂಜಾನೆ ಎಂಇಎಸ್ ಪುಂಡರು ಭಗ್ನಗೊಳಿಸಿ, ಕತ್ತಿ ಮತ್ತು ಗುರಾಣಿಯನ್ನು ಬೇರೆ ಬೇರೆ ದಿಕ್ಕುಗಳಲ್ಲಿ ಬಿಸಾಡಿದ್ದರು. ಎಂಇಎಸ್ ಪುಂಡರಿಂದ ಹಾನಿಗೊಳಗಾಗಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಜಿಲ್ಲಾಡಳಿತ ಸರಿಪಡಿಸಿ, ಕತ್ತಿ ಮತ್ತು ಗುರಾಣಿಯನ್ನು ಅಳವಡಿಸಿ ಭಾನುವಾರ ಬೆಳಗಾಗುವಷ್ಟ ರಲ್ಲಿ ಅದೇ ಸ್ಥಳದಲ್ಲಿ ಪುನರ್ ಪ್ರತಿಷ್ಠಾಪನೆ ಮಾಡಿತು. ಸ್ಥಳೀಯರು ಮತ್ತು ಕನ್ನಡಪರ ಸಂಘಟನೆಗಳ ಮುಖಂ ಡರು ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿ ‘ಜೈ ಜೈ ರಾಯಣ್ಣ, ಜೈ ಜೈ ಚೆನ್ನಮ್ಮ’ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಇದೇ ವೇಳೆ ಎಂಇಎಸ್ ಪುಂಡರ ವಿರುದ್ಧ ಕನ್ನಡ ಪರ ಸಂಘ ಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆಯಿಂದ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Translate »