ಬೆಂಗಳೂರು,ಸೆ.21-ಸಿಲಿಕಾನ್ ಸಿಟಿಯನ್ನು ತಲ್ಲಣಗೊಳಿ ಸಿದ್ದ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯನ್ನು ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಪೆÇಲೀಸರು ಹೆಡೆಮುರಿ ಕಟ್ಟಿದ್ದಾರೆ.
ಶೋಯೆಬ್ ಬಂಧಿತ ಆರೋಪಿ ಯಾಗಿದ್ದು, ಎಟಿಎಸ್ ಪೆÇಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. 2008 ರಿಂದ ಆರೋಪಿ ತಲೆಮರೆಸಿ ಕೊಂಡಿದ್ದ. ಆದರೆ ಪೆÇಲೀಸರು ಮಾತ್ರ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಹುಡು ಕಾಟದಲ್ಲೇ ತೊಡಗಿದ್ದರು. ಹೀಗೆ ತನಿಖೆ ನಡೆಸುವಾಗ ಕೇರಳ ದಲ್ಲಿರುವುದು ಪತ್ತೆಯಾಗಿದ್ದು, ಹೊಂಚು ಹಾಕಿ ಆರೋಪಿ ಯನ್ನು ಬಂಧಿಸಿದ್ದಾರೆ. ಈ ಮೂಲಕ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದಂತಾಗಿದೆ. ಪ್ರಕರಣದ ಬಹುತೇಕ ಆರೋಪಿಗಳು ಕೇರಳದಲ್ಲೇ ತಲೆಮರೆಸಿ ಕೊಂಡಿದ್ದು, ಎಟಿಎಸ್ ಪೆÇಲೀಸರು ಎಷ್ಟೇ ಹುಡುಕಿದರೂ ಪ್ರಮುಖ ಆರೋಪಿ ಶೋಯೆಬ್ ಸಿಕ್ಕಿರಲಿಲ್ಲ. ಈ ಹಿಂದೆ ಆರೋಪಿ ಸಲೀಂನನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದರು. ಈತ ಸಹ ಕೇರಳದಲ್ಲಿಯೇ ತಲೆಮರೆಸಿಕೊಂಡಿದ್ದ. 2018ರಲ್ಲಿ ಸಲೀಂನನ್ನು ಬಂಧಿಸಲಾಗಿತ್ತು. ಪ್ರಮುಖ ಆರೋಪಿಗಾಗಿ ಬಲೆ ಬೀಸಲಾಗಿತ್ತು.