ಅರಣ್ಯಾಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಬಂಧನ
ಚಾಮರಾಜನಗರ

ಅರಣ್ಯಾಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಬಂಧನ

August 7, 2018

ಗುಂಡ್ಲುಪೇಟೆ: ಸೂಕ್ಷ್ಮ ಪರಿಸರ ವಲಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡದಂತೆ ನೊಟೀಸ್ ನೀಡಲು ಹೋಗಿದ್ದ ವಲಯ ಅರಣ್ಯಾಧಿಕಾರಿ ಮೇಲೆ ಹಲ್ಲೆ ನಡೆಸಲೆತ್ನಿಸಿದ್ದ ಆರೋಪಿಯನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿಬೆಟ್ಟ ಅರಣ್ಯ ವಲಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ಅನುಮತಿ ಇಲ್ಲದೆ ರೆಸಾರ್ಟ್ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಸುನಿಲ್ ಎಂಬುವರಿಗೆ ನೋಟೀಸ್ ನೀಡಲು ಹೋಗಿದ್ದಾಗ ತಮ್ಮ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರ್‍ಎಫ್‍ಒ ಪುಟ್ಟಸ್ವಾಮಿ ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿ ಆರೋಪಿ ಸುನಿಲ್ ಅವರÀನ್ನು ವಶಕ್ಕೆ ಪಡೆದು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಎಚ್.ಎನ್.ಬಾಲಕೃಷ್ಣ ಹಾಗೂ ಪಿಎಸ್‍ಐ ಬಿ.ಎಸ್.ಶಿವರುದ್ರ ಹಾಗೂ ಸಿಬ್ಬಂದಿ ಇದ್ದರು.

Translate »