ಕೊಡಗಿಗೆ ಕೇಂದ್ರ ಅಧ್ಯಯನ ತಂಡ ಆಗಮನ
ಕೊಡಗು

ಕೊಡಗಿಗೆ ಕೇಂದ್ರ ಅಧ್ಯಯನ ತಂಡ ಆಗಮನ

September 13, 2018

ಮಡಿಕೇರಿ: ಅತೀ ವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಕೇಂದ್ರ ಸರ್ಕಾ ರದ ಹಿರಿಯ ಐಎಎಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಡಿಕೇರಿ ಸಮೀಪದ ಹಾಲೇರಿ, ಕಾಂಡಕೊಲ್ಲಿ, ಹಟ್ಟಿಹೊಳೆ, ಸೋಮವಾರಪೇಟೆ ರಸ್ತೆಯ ಭೂಕುಸಿತ ಪ್ರದೇಶಗಳಿಗೆ ತೆರಳಿ ವಾಸ್ತವಾಂಶವನ್ನು ದಾಖಲಿಸಿಕೊಂಡರು. ಕೇಂದ್ರ ಸರಕಾರದ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಭಿಯಂತರ ಜಿತೇಂದ್ರ ಪನ್ವ, ಕೇಂದ್ರ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಪೊನ್ನುಸ್ವಾಮಿ ಅವರುಗಳು ಅತೀವೃಷ್ಠಿ ಹಾನಿಯ ಕುರಿತು ಪರಿಶೀಲನೆ ನಡೆಸಿದರು.

ಬೆಟ್ಟ ಕುಸಿತ, ಹೆದ್ದಾರಿ ಹಾನಿ ಮತ್ತು ತೋಟಗಾರಿಕೆ ಬೆಳೆಗಳಿಗಾದ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಾತ್ರವಲ್ಲದೆ ಆ ಹಾನಿಗೀಡಿದ ಪ್ರದೇಶಗಳಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲನೆಯನ್ನು ನಡೆಸಿದರು. ಬಳಿಕ ಮುಕ್ಕೋಡ್ಲು, ಹಟ್ಟಿ ಹೊಳೆ ಕಡೆಗೆ ತೆರಳಿದ ತಂಡ ಗ್ರಾಮೀಣ ಭಾಗಗಳಲ್ಲಾದ ಹಾನಿಯ ಕುರಿತು ಮಾಹಿತಿ ಸಂಗ್ರಹಿಸಿದರು.

ಜಿಲ್ಲಾಧಿಕಾರಿ ಶ್ರೀವಿದ್ಯಾ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಅವರು ಗಳು ಅತೀವೃಷ್ಠಿಯಿಂದಾಗಿ ಬೆಳೆ, ಕೃಷಿ ಫಸಲು ನಾಶದ ಬಗ್ಗೆ ಅಧಿಕಾರಿಗಳ ತಂಡಕ್ಕೆ ವಿವರಿಸಿದರಲ್ಲದೇ ಈಗಾಗಲೇ ಕೇಂದ್ರ ವಿಪತ್ತು ನಿರ್ವಹಣಾ ನಿಧಿಯ ಮಾರ್ಗ ಸೂಚಿ ಅನ್ವಯ ನಿಗಧಿಪಡಿಸಲಾಗಿರುವ ಪರಿಹಾರದ ಮೊತ್ತವನ್ನ ಏರಿಕೆ ಮಾಡುವಂತೆಯೂ ಮನವಿ ಸಲ್ಲಿಸಿದರು. ವಿಪತ್ತು ಅಧ್ಯಯನಕ್ಕೆ ಆಗಮಿಸಿದ ಅಧಿಕಾರಿಗಳ ತಂಡ ಸೆ.13 ರಂದು ಕೂಡ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀ ಲನೆ ನಡೆಸಲಿದ್ದು, ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ.

ಕೇಂದ್ರ ಅಧ್ಯಯನ ತಂಡದ ಅಧಿಕಾರಿ ಗಳು ಸುದ್ದಿಗಾರರೊಂದಿಗೆ ತಮ್ಮ ಅಧ್ಯಯನ ಭೇಟಿಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಲಿಲ್ಲ. ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಜಿಲ್ಲಾಧಿ ಕಾರಿ ಪಿ.ಐ.ಶ್ರೀವಿದ್ಯಾ ಈಗಾಗಲೇ ಕೃಷಿ ಇಲಾಖೆ, ತೋಟಗಾರಿಕೆ, ಕಾಫಿ ಮಂಡಳಿ, ಸಂಬಾರ ಮಂಡಳಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಗಳು ಮಳೆ ಹಾನಿಯಿಂದಾದ ನಷ್ಟದ ಕುರಿತು ಮಾಹಿತಿ ನೀಡಿದ್ದಾರೆ. ಈ ಮಾಹಿತಿಗಳನ್ನು ಕೇಂದ್ರದ ಅಧ್ಯಯನ ತಂಡಕ್ಕೆ ಸಲ್ಲಿಸಲಾ ಗಿದ್ದು, ರಾಜ್ಯ ಸರಕಾರದ ಮುಖ್ಯಕಾರ್ಯ ದರ್ಶಿಯೊಂದಿಗೆ ಚರ್ಚಿಸಿ ಬಳಿಕ ವರದಿ ಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸ ಲಾಗುತ್ತದೆ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕೇಂದ್ರದಿಂದ ಬಂದಿರುವ ಅಧ್ಯಯನ ತಂಡ ಜಿಲ್ಲೆಯಲ್ಲಾದ ಅತೀವೃಷ್ಟಿ ಹಾನಿಯ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಕೃಷಿ ಫಸಲು, ತೋಗಾರಿಕೆ ಬೆಳೆಗಳು ನಾಶ ಗೊಂಡಿರುವ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದ್ದು, ಸಮಗ್ರ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಿದ್ದಾರೆ. ಆ ಬಳಿಕ ಕೇಂದ್ರ ಸರಕಾರ ಪರಿಹಾರ ಘೋಷಣೆ ಮಾಡಲಿದೆ ಎಂದು ತಿಳಿಸಿದರು.

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಬೆಳೆ ಮತ್ತು ಫಸಲು ನಷ್ಟದಿಂದ ಸಂತ್ರಸ್ಥ ರಾದವರಿಗೆ ಹೆಚ್ಚಿನ ಪರಿಹಾರ ಕಲ್ಪಿಸಬೇಕಿದೆ. ತೋಟ, ಕೃಷಿ ಗದ್ದೆ ಕಳೆದು ಕೊಂಡವರಿಗೆ ಜಾಗವನ್ನು ವಿತರಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಜಿಪಂ ಮಾಜಿ ಅಧ್ಯಕ್ಷ ರವಿ ಕುಶಾ ಲಪ್ಪ, ಪಿಡಬ್ಲೂಡಿ, ಚೆಸ್ಕಾಂ, ಹೆದ್ದಾರಿ ಪ್ರಾಧಿಕಾರ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Translate »