ಅರಸೀಕೆರೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ: ಸಮರ್ಪಕ ಬರ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
ಹಾಸನ

ಅರಸೀಕೆರೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ: ಸಮರ್ಪಕ ಬರ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

February 14, 2019

ಹಾಸನ: ಬೇಸಿಗೆಯ ನಿರ್ವ ಹಣೆ ಅರಸೀಕೆರೆ ತಾಲೂಕು ಆಡಳಿತಕ್ಕೆ ಸವಾಲಿನ ಕೆಲಸವಾಗಿದ್ದು ಅದನ್ನು ವ್ಯವಸ್ಥಿತ ವಾಗಿ ಅಧಿಕಾರಿಗಳು ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದ್ದಾರೆ.

ನಗರದ ಸಮುದಾಯ ಭವನದಲ್ಲಿ ಬುಧ ವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು ಬರ ನಿರ್ವಹಣೆಗೆ ಅನುದಾನದ ಕೊರತೆಯಿಲ್ಲ. ಆದರೆ ಕುಡಿ ಯುವ ನೀರು ಪೂರೈಕೆ ಹಾಗೂ ಜಾನು ವಾರುಗಳ ಮೇವಿಗೆ ಯಾವುದೇ ತೊಂದರೆ ಯಾಗದಂತೆ ನಿರ್ವಹಣೆ ಮಾಡಿ ಎಂದರು.

ಪ್ರತಿಯೊಂದು ಗ್ರಾಮದ ನೀರಿನ ಪರಿಸ್ಥಿತಿ ಜಲಮೂಲಗಳ ಬಗ್ಗೆ ಮತ್ತೆ ಮರು ಸಮೀಕ್ಷೆ ನಡೆಸಿ, ಆಗಬೇಕಾಗಿರುವ ಕಾಮಗಾರಿಗಳ ಬಗ್ಗೆ ನಿಖರವಾದ ಯೋಜನಾ ವರದಿ ಸಲ್ಲಿಸು ವಂತೆ ಅವರು ತಹಶೀಲ್ದಾರ್, ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರರು ತಾಲೂಕು ಪಂಚಾ ಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಿಡಿಓಗಳಿಗೆ ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಕಾಮಗಾರಿಗಳಿಗೆ 14ನೇ ಹಣಕಾಸು ಯೋಜನೆ ಮೂಲಕ ಒದಗಿಸಿರುವ ಹಣವನ್ನು ಬಳಸಿಕೊಳ್ಳಿ ಮೋಟಾರ್, ಪಂಪ್ ಪೈಪ್‍ಲೈನ್‍ಗಳಿಗೆ ಹೆಚ್ಚುವರಿ ಅನುದಾನಬೇಕಾದಲ್ಲಿ ತಮ್ಮ ಬಳಿ ಇರುವ ಪ್ರಕೃತಿ ವಿಕೋಪ ನಿಧಿಯಿಂದ ಭರಿಸಲಾಗುವುದು ಎಂದು ಹೇಳಿದರು.

ನಿರಂತರ ಬರದಿಂದ ತತ್ತರಿಸಿರುವ ಅರಸೀ ಕೆರೆ ತಾಲೂಕಿನಲ್ಲಿ ಈ ವರ್ಷವೂ ಅದೇ ಪರಿಸ್ಥಿತಿ ಮುಂದುವರೆದಿರುವ ಹಿನ್ನೆಲೆ ಯಲ್ಲಿ ಒಂದೇ ಕಾಮಗಾರಿಗೆ ಎರಡೆರಡು ಯೋಜನೆ ಸೇರ್ಪಡೆ ಮಾಡಬಾರದು. ಎಷ್ಟು ಅಗತ್ಯವಿದೆಯೋ ಅಷ್ಟಕ್ಕೆ ಮಾತ್ರ ಕ್ರಿಯಾ ಯೋಜನೆ ಸಲ್ಲಿಸಬೇಕು. ಅಕ್ರಮ ಗಳು ಕಂಡು ಬಂದಲ್ಲಿ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತೀ ಗ್ರಾಮದ ಮನೆ ಮನೆಗೆÉ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ 18ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಬಗ್ಗೆ ಪರಿಶೀಲಿಸಬೇಕು. ಎಲ್ಲಾ ಗ್ರಾಮ ಗಳಲ್ಲಿ ಸಾಮಾಜಿಕ ಭದ್ರತಾ ಯೋಜನೆ ಗಳಲ್ಲಿ ಅರ್ಹರಾಗಿರುವವರೆಲ್ಲರೂ ಪಿಂಚಣಿ ಸೌಲಭ್ಯ ಪಡೆಯುತ್ತಿರುವ ಬಗ್ಗೆ ಖಾತರಿಪಡಿಸಿ ಹಾಗೂ ಮನೆ ಇಲ್ಲದ ಬಡ ಕುಟುಂಬಗಳನ್ನು ಗುರುತಿಸಿ ನಿವೇಶನ ಮಂಜೂರು ಮಾಡಿ ಎಂದು ನಿರ್ದೇಶನ ನೀಡಿದರು.
ತಾಲೂಕಿನಲ್ಲಿ ಹೊಸ ಖಾಸಗಿ ಕೊಳವೆ ಕೊರೆಯಲು ಅನುಮತಿ ನೀಡುತ್ತಿಲ್ಲ. ಸರ್ಕಾರಿ ಕೊಳವೆ ಬಾವಿಗಳನ್ನು ಇತಿ ಮಿತಿಯಲ್ಲಿ ಕೊರೆ ಯಿಸಿ, ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

14ನೇ ಹಣಕಾಸು ಹಾಗೂ ಟಾಸ್ಕ್ ಫೋರ್ಸ್‍ನಡಿ ಒದಗಿಸುವ ಹಣವನ್ನು ಸಾಧ್ಯವಾದಷ್ಟು ಶಾಶ್ವತ ಯೋಜನೆಗಳಿಗೆ ಆದ್ಯತೆ ನೀಡಿ ಟ್ಯಾಂಕರ್‍ಗಳಲ್ಲಿ ನೀರು ಪೂರೈಕೆ ದುರುಪಯೋಗಕ್ಕೆ ದಾರಿಯಾಗ ದಂತೆ ಎಚ್ಚರ ವಹಿಸಬೇಕು. ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದ ಹಲವು ಅರ್ಜಿಗಳು ಬಾಕಿ ಉಳಿದಿದ್ದು, ತ್ವರಿತ ವಾಗಿ ವಿಲೇವಾರಿ ಮಾಡಿ ಸಾರ್ವಜನಿಕ ರಿಗೆ ಸರ್ಕಾರದ ಯೋಜನೆಗಳನ್ನು ಸಕಾಲ ದಲ್ಲಿ ತಲುಪಿಸಿ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪುಟ್ಟಸ್ವಾಮಿ ಮಾತ ನಾಡಿ, ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಕುಡಿಯುವ ನೀರು ಪೂರೈಕೆ ಯೋಜನೆ ಗಳಿಗೆ ಅನುದಾನ ಒದಗಿಸಲಾಗಿದೆ. ಇದ ಲ್ಲದೆ ಉದ್ಯೋಗ ಖಾತರಿ ಯೋಜನೆಯಡಿ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ಇನ್ನೂ ಅಗತ್ಯವಿರುವ ಕಡೆ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
14ನೇ ಹಣಕಾಸು ಯೋಜನೆಯಡಿ ಬಿಡುಗಡೆ ಮಾಡಿರುವ ಅನುದಾನವನ್ನು ಶೇ. 80ರಷ್ಟು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್, ತಹಶೀ ಲ್ದಾರ್ ನಟೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಬರ ನಿರ್ವಹಣೆಗೆ ಸಂಬಂಧಿಸಿದಂತೆ ವಾರಕ್ಕೊಮ್ಮೆ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ನಗರಸಭೆ ಆಯುಕ್ತರು ಸಂಬಂಧಪಟ್ಟ ಇಂಜಿನಿಯರ್, ಪಿಡಿಓಗಳು ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಬೇಕು.
-ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ

Translate »