ಸೆ.28ರಿಂದ ವಿದ್ಯಾವರ್ಧಕ ಕಾಲೇಜಿನಲ್ಲಿ ಕಲಾ ಸಂಭ್ರಮ
ಮೈಸೂರು

ಸೆ.28ರಿಂದ ವಿದ್ಯಾವರ್ಧಕ ಕಾಲೇಜಿನಲ್ಲಿ ಕಲಾ ಸಂಭ್ರಮ

September 26, 2018

ಮೈಸೂರು:  ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವರ್ಷಾಚರಣೆ ಅಂಗವಾಗಿ ಸೆ.28 ಮತ್ತು 29ರಂದು ಕಾಲೇಜು ಸಭಾಂಗಣದಲ್ಲಿ ರಾಜ್ಯಮಟ್ಟದ ಅಂತರ ಕಲಾ ಕಾಲೇಜುಗಳ ಕಲಾ ಉತ್ಸವ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಮರೀಗೌಡ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಸೆ.28ರಂದು ಬೆಳಿಗ್ಗೆ 10 ಗಂಟೆಗೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಂದು ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳಿಂದಾಗಿ ಯುವ ಜನತೆಯ ಸೃಜನಶೀಲತೆ ಕುಂಠಿತವಾಗುತ್ತಿದೆ ಎಂಬ ವಿಷಯ ಕುರಿತು ಚರ್ಚಾ ಸ್ಪರ್ಧೆ, 29ರಂದು ಬೆಳಿಗ್ಗೆ 10.30 ಗಂಟೆಗೆ ಭಾವಗೀತೆ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಲೇಜು ನಿರ್ವಹಣಾ ಮಂಡಳಿಯ ನಾಗರಾಜು ಉಪಸ್ಥಿತರಿದ್ದರು.

Translate »