ಅರಮನೆ ಗುರು ಮನೆಗಳಿಂದ ಕಲೆ, ಸಾಹಿತ್ಯ, ಸಂಸ್ಕøತಿ ಉಳಿಯಲು ಸಾಧ್ಯ
ಮೈಸೂರು

ಅರಮನೆ ಗುರು ಮನೆಗಳಿಂದ ಕಲೆ, ಸಾಹಿತ್ಯ, ಸಂಸ್ಕøತಿ ಉಳಿಯಲು ಸಾಧ್ಯ

July 8, 2018

ಮೈಸೂರು:  ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಚಟುವಟಿಕೆಗಳು ಮನಸ್ಸಿಗೆ ಮುದ ನೀಡುವುದರ ಜೊತೆಗೆ ಅವರ ವಿದ್ಯಾಭ್ಯಾಸದ ಪ್ರಗತಿಗೆ ಪೂರಕವಾಗಿರುತ್ತವೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮಲ್ಲಿರುವ ಸುಪ್ತ ಪ್ರತಿಭೆಗಳಿಗೆ ನೀರೆರೆದು ಪೋಷಿಸಿ, ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ.ಜ್ಯೋತಿ ಶಂಕರ್ ತಿಳಿಸಿದರು.

ಜೆ.ಪಿ.ನಗರದ ಜೆಎಸ್‍ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕøತಿಕ ವೇದಿಕೆ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಅಭಿಪ್ರಾಯಪಟ್ಟರು. ಪ್ರಾಚೀನ ಕಾಲದಲ್ಲಿ ಗುರುಕುಲಗಳು ಶೈಕ್ಷಣಿಕ ಹಾಗೂ ಸಾಂಸ್ಕøತಿಕವಾಗಿ ದೇಶ ಅಭಿವೃದ್ಧಿ ಹೊಂದಲು ಅಪಾರ ಕಾಣಿಕೆ ನೀಡಿದೆ. ಪ್ರಸ್ತುತ ಗುರುಮನೆಗಳು ಈ ಕಾರ್ಯಗಳನ್ನು ಮುಂದುವರೆಸಿದ್ದು, ಅಂತೆಯೇ ಸುತ್ತೂರು ಶ್ರೀಮಠವು ಶಿಕ್ಷಣ, ಸಂಗೀತ, ಸಾಹಿತ್ಯ ಹಾಗೂ ಸಾಂಸ್ಕøತಿಕ ಕ್ಷೇತ್ರಗಳಿಗೆ ಪ್ರೋತ್ಸಾಹವನ್ನು ನೀಡುತ್ತ ಮನುಕುಲವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯುತ್ತಿದೆ. ವಿದ್ಯಾರ್ಥಿಗಳು ತಂದೆ, ತಾಯಿ ಮತ್ತು ಗುರು ಈ ಮೂವರನ್ನು ಗೌರವಿಸಬೇಕು. ಹಾಗಾದಾಗ ಮಾತ್ರ ಉತ್ತಮ ಸಂಸ್ಕøತಿ ಹೊಂದಲು ಸಾಧ್ಯ. ಉತ್ತಮ ಸಹವಾಸವನ್ನು ಮಾಡುವುದರ ಜೊತೆಗೆ ವಿದ್ಯಾರ್ಥಿಗಳು ಸಾಂಸ್ಕøತಿಕ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಬೇಕೆಂದು ಅವರು ಕರೆ ನೀಡಿದರು.

ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಕ್ರೀಡಾಪಟು ಮತ್ತು ಈಜು ತರಬೇತುದಾರ ಎಸ್.ಶಿವಕುಮಾರ್, ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಅನಿವಾರ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಯುವಜನತೆ ತಮ್ಮ ದೈಹಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದರೆ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅನೇಕ ಉಜ್ವಲ ಅವಕಾಶಗಳು ಲಭಿಸುತ್ತವೆ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಜೆಎಸ್‍ಎಸ್ ಮಹಾವಿದ್ಯಾಪೀಠದ ಪಬ್ಲಿಕ್ ಶಾಲೆಗಳ ವಿಭಾಗದ ನಿರ್ದೇಶಕ ಶ್ರೀನಿವಾಸ ಕೆ.ಅಯ್ಯಂಗಾರ್ ಮಾತನಾಡುತ್ತ, ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿ ಗೆಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಗಮನಹರಿಸಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರೆಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಉಮಾಮಹೇಶ್ವರಿ ಅವರು ಉಪಸ್ಥಿತರ ಭಾಷಣ ನಡೆಸಿಕೊಟ್ಟರು. ಸಾಂಸ್ಕøತಿಕ ಕಾರ್ಯದರ್ಶಿ ಎಸ್.ನಂದೀಶ್, ಶ್ರೀಮತಿ ಹೆಚ್.ಟಿ.ನಿರ್ಮಲ, ದೈಹಿಕ ಶಿಕ್ಷಣ ನಿರ್ದೇಶಕ ಹೆಚ್.ಎನ್.ನಾಗರಾಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು.ನಿಸರ್ಗಪ್ರಿಯ ಪ್ರಾರ್ಥನೆಯೊಂದಿಗೆ ಆರಂಭವಾದ ಸಮಾರಂಭದಲ್ಲಿ ಶ್ರೀಮತಿ ಹೆಚ್.ಟಿ.ನಿರ್ಮಲ ಸ್ವಾಗತಿಸಿದರು. ಎಸ್.ಎಂ.ಗುರುಪಾದಪ್ಪ ವಂದಿಸಿದರು. ಎಸ್.ನಂದೀಶ್ ಕಾರ್ಯಕ್ರಮ ನಿರೂಪಿಸಿದರು.

Translate »