ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಕಮಲದಲ್ಲಿ ಕಳವಳ
News

ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಕಮಲದಲ್ಲಿ ಕಳವಳ

June 16, 2021

ಬೆಂಗಳೂರು,ಜೂ.15-ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಜೂನ್ 18ರಂದು ರಾಜ್ಯ ಕೋರ್ ಕಮಿಟಿ ಸಭೆ ನಡೆಯ ಲಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ ಎಂದು ಈಗಾಗಲೇ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಆದರೆ ಅರವಿಂದ ಬೆಲ್ಲದ್ ಸೋಮವಾರ ದೆಹಲಿಯಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದ್ದು, ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
3 ದಿನಗಳ ಭೇಟಿಯಾಗಿ ಅರುಣ್‍ಸಿಂಗ್ ಬುಧವಾರ ಸಂಜೆ ಬೆಂಗಳೂರಿಗೆ ಬರ ಲಿದ್ದಾರೆ. ಮೊದಲ ದಿನ ಅವರು ಸಚಿ ವರನ್ನು ಭೇಟಿ ಮಾಡಿ ಮಾತು ಕತೆ ನಡೆಸಲಿ ದ್ದಾರೆ. 2ನೇ ದಿನ ಶಾಸಕ ರನ್ನು ಭೇಟಿ ಯಾಗಲಿದ್ದಾರೆ. ಯಡಿಯೂರಪ್ಪ ವಿರುದ್ಧ ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದು, ಅವರೆಲ್ಲರೂ ಅರುಣ್ ಸಿಂಗ್ ಮುಂದೆ ತಮ್ಮ ಅಭಿಪ್ರಾಯ ಗಳನ್ನು ಮಂಡಿಸಲು ತಯಾರಿ ನಡೆಸಿದ್ದಾರೆ. ಪ್ರತಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಿದ್ದು, ಒಬ್ಬ ಶಾಸಕರಿಗೆ 15 ನಿಮಿಷ ಮಾತನಾಡಲು ಅವಕಾಶ ಕೊಡಲಾಗಿದೆ.

ಕೋರ್ ಕಮಿಟಿ ಸಭೆ: ಹಲವು ಬಿಜೆಪಿ ಶಾಸಕರು ಶಾಸ ಕಾಂಗ ಪಕ್ಷದ ಸಭೆ ಕರೆಯುವಂತೆ ಬೇಡಿಕೆ ಇಟ್ಟಿದ್ದಾರೆ. ಕೆಲವು ಸಚಿವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ಗೊಂಡಿದ್ದಾರೆ. ನಾಯಕತ್ವ ಬದಲಾವಣೆ ಮಾಡದಂತೆ ಶಾಸಕರ ಸಹಿ ಸಂಗ್ರಹ ಮಾಡಲಾಗಿದೆ ಎಂಬುದು ಸೇರಿ ದಂತೆ ಹಲವು ವಿಚಾರಗಳು ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡುವ ಶಾಸಕರಿಗೆ ಅರುಣ್ ಸಿಂಗ್ ಎಚ್ಚರಿಕೆ ರವಾನಿಸುವ ಸಾಧ್ಯತೆ ಇದೆ. ಹಲವು ಶಾಸಕರು ಬಹಿರಂಗವಾಗಿ ನಾಯಕತ್ವದ ವಿಚಾರದಲ್ಲಿ ಪ್ರತಿದಿನ ಮಾಧ್ಯಮ ಗಳ ಮುಂದೆ ಮಾತನಾಡುತ್ತಿದ್ದಾರೆ. ಜೂ.18ರಂದು ರಾಜ್ಯ ಕೋರ್ ಕಮಿಟಿ ಸಭೆ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರದಿಂದ ಕರ್ನಾಟಕ ಬಿಜೆಪಿ ಹಲವಾರು ವಿದ್ಯಮಾನಗಳಿಗೆ ಸಾಕ್ಷಿಯಾಗಲಿದೆ. ರಾಜ್ಯ ಬಿಜೆಪಿ ಉಸ್ತುವಾರಿಗಳು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವವರ ಹೇಳಿಕೆಗೆ ಕಡಿವಾಣ ಹಾಕಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

Translate »