ಮೈಸೂರು: ಮೈಸೂರಿ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅರುಣಾಚಲ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಮೈಸೂರಿನ ಬನ್ನಿಮಂಟಪದ ಶ್ರೀಶಿವ ರಾತ್ರೀಶ್ವರ ನಗರದಲ್ಲಿ ರೂಮ್‍ವೊಂದನ್ನು ಬಾಡಿಗೆಗೆ ಪಡೆದು ವಾಸಿಸುತ್ತಿದ್ದ ಅರುಣಾ ಚಲ ಪ್ರದೇಶ ನಿವಾಸಿ ಲೂಮಾ ಡ್ರೀಮಾ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಯಾಗಿದ್ದಾರೆ. ಬನ್ನಿಮಂಟಪದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಲೂಮಾ, ಸ್ನೇಹಿತ ರೊಂದಿಗೆ ನೆಲೆಸಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೆÇಲೀಸರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಲೂಮಾ ಸ್ನೇಹಿತರು ರೂಮ್‍ಗೆ ಬಂದು ನೋಡಿದಾಗ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮಹಜರು ನಡೆಸಿ, ದೇಹವನ್ನು ಮೈಸೂರು ಮೆಡಿಕಲ್ ಕಾಲೇಜಿನ ಶವಾಗಾರಕ್ಕೆ ಸಾಗಿ ಸಿದರು. ಇಂದು ಸಂಜೆ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಿ ದರು. ಈ ಸಂಬಂಧ ಎನ್.ಆರ್. ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.