ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ
ಮೈಸೂರು

ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ

February 24, 2021

ಬೆಂಗಳೂರು, ಫೆ.23(ಕೆಎಂಶಿ)-ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದ ರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅವಧಿಯಲ್ಲಿ ತಮಗೆ ಸಲಹೆ, ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

 

Translate »