ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲಿಕೆಯಿಂದ ಕಾಟಾಚಾರಕ್ಕೆ ಸ್ವಚ್ಛತಾ ಕಾರ್ಯಕ್ರಮ
ಮೈಸೂರು

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲಿಕೆಯಿಂದ ಕಾಟಾಚಾರಕ್ಕೆ ಸ್ವಚ್ಛತಾ ಕಾರ್ಯಕ್ರಮ

June 2, 2018

ಸ್ವಚ್ಛತಾ ರಾಯಭಾರಿ ರಾಜಮಾತೆ ಪ್ರಮೋದಾದೇವಿ ಒಡೆಯರ್‍ಗೆ ಪಾಲಿಕೆ ಅಗೌರವ

ಮೈಸೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ನಿಷೇಧ ಕುರಿತು ಅರಿವು ಮೂಡಿಸಲು ಮೈಸೂರು ನಗರಪಾಲಿಕೆ ಮೈಸೂರಿನ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮ ಬರೀ ಕಾಟಾಚಾರಕ್ಕೆ ಎಂಬಂತೆ ನಡೆಯಿತು.

ಸ್ವಚ್ಛತಾ ರಾಯಭಾರಿಯಾಗಿರುವ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ ಎಂದು ಪಾಲಿಕೆ ಅಧಿಕಾರಿಗಳು ಪ್ರಕಟಣೆ ನೀಡಿದ್ದರು. ಆದರೆ ನಿಜಸ್ಥಿತಿ ಎಂದರೆ ಪಾಲಿಕೆ ಅಧಿಕಾರಿಗಳು ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತವಾಗಿ ಮಾಹಿತಿಯನ್ನೇ ನೀಡಿರಲಿಲ್ಲ ಎನ್ನಲಾಗಿದೆ. ಈ ಕಾರಣಕ್ಕಾಗಿ ಅವರು ಕಾರ್ಯಕ್ರಮಕ್ಕೆ ಬರಲಿಲ್ಲ.

ಹೀಗಾಗಿ ಬೆಳಿಗ್ಗೆ 7 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ ವಿಳಂಬವಾಗಿ 8 ಗಂಟೆಗೆ ಪಾಲಿಕೆ ಹಿರಿಯ ಆರೋಗ್ಯಾಧಿಕಾರಿಗಳಾದ ಡಾ.ರಾಮಚಂದ್ರ, ಡಾ.ನಾಗರಾಜು ನೇತೃತ್ವದಲ್ಲಿ ಪೌರ ಕಾರ್ಮಿಕರ ಕರೆಸಿ ಸ್ವಚ್ಛತಾ ಕಾರ್ಯ ಕೈಗೊಂಡರು. ಬಳಿಕ ನಟರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯರು ಸ್ಥಳಕ್ಕೆ ಬಂದು ಈ ಕಾರ್ಯದಲ್ಲಿ ಕೈಜೋಡಿಸಿದರು.

Translate »