ನಾಳೆ ಡಿಸಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು

ನಾಳೆ ಡಿಸಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

June 29, 2020

ಮೈಸೂರು, ಜೂ.28(ಪಿಎಂ)- ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 12 ಸಾವಿರ ರೂ. ವೇತನ ನಿಗದಿ ಮಾಡ ಬೇಕು ಹಾಗೂ ಅಗತ್ಯವಿರುವಷ್ಟು ಆರೋಗ್ಯ ರಕ್ಷಣಾ ಸಾಮಗ್ರಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ (ಎಐಯುಟಿ ಯುಸಿ ಸಂಯೋಜಿತ) ಜೂ.30ರಂದು ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡಸಲಾಗುತ್ತಿದೆ. ಜು.10ರಿಂದ ಆರೋಗ್ಯ ಸೇವೆ ಸಂಪೂರ್ಣ ಸ್ಥಗಿತ ಗೊಳಿಸಿ ಅನಿರ್ದಿಷ್ಟಾವಧಿವರೆಗೆ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ಆಶಾ ಕಾರ್ಯ ಕರ್ತೆಯರು ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರಿಗೆ ಕನಿಷ್ಠ ವೇತನವನ್ನೂ ನೀಡುತ್ತಿಲ್ಲ. ಮಾಸಿಕ ಕೇವಲ 4 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಅವರ ಅಪಾರ ಶ್ರಮಕ್ಕೆ ಸರ್ಕಾರ ಬಿಡಿಗಾಸು ನೀಡಿ ಕೈತೊಳೆದುಕೊಳ್ಳುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಗೌರವಧನದೊಂದಿಗೆ ವಿವಿಧ ಚಟುವಟಿಕೆ ಗಳಿಗೆ ಹೆಚ್ಚುವರಿಯಾಗಿ ಕೆಲಸವನ್ನು ಆಧರಿಸಿ 2ರಿಂದ 3 ಸಾವಿರ ರೂ.ವರೆಗೆ ಪ್ರೋತ್ಸಾಹ ಧನ ಕೊಡುವ ವ್ಯವಸ್ಥೆ ಇದೆ. ಆದರೆ ನಿರ್ವ ಹಿಸಿದ ಚಟುವಟಿಕೆಗಳನ್ನು `ಆಶಾ ಸಾಫ್ಟ್’ ವೆಬ್‍ಪೋರ್ಟಲ್‍ಗೆ ಅಪ್‍ಲೋಡ್ ಮಾಡ ಬೇಕಿದೆ. ಸಂಬಂಧಿಸಿದ ಇಲಾಖಾ ಸಿಬ್ಬಂದಿ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಪ್ರೋತ್ಸಾಹಧನವೂ ಸಮಯಕ್ಕೆ ಸರಿ ಯಾಗಿ ತಲುಪುತ್ತಿಲ್ಲ ಎಂದು ಅಸಮಾ ಧಾನ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂಬು ದನ್ನು ಗಮನಿಸಿದರೆ ಆಶಾ ಕಾರ್ಯಕರ್ತೆ ಯರ ಮಹತ್ವ ಅರಿವಾಗುತ್ತದೆ. ಆದರೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆ ಯರಿಗೆ ಮಾಸ್ಕ್, ಫೇಸ್‍ಶೀಲ್ಡ್, ಗ್ಲೌಸ್ ಹಾಗೂ ಸ್ಯಾನಿಟೈಸರ್ ಇತ್ಯಾದಿ ಆರೋಗ್ಯ ರಕ್ಷಣಾ ಪರಿಕರಗಳನ್ನು ಸರಿಯಾಗಿ ನೀಡುತ್ತಿಲ್ಲ. ಹಲವೆಡೆ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಸೋಂಕಿತರ ನಡುವೆ ಕೆಲಸ ಮಾಡುವ ಪರಿಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಆರೋಗ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಸೇವೆ ನೀಡುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು. ಕೊರೊನಾ ಸೋಂಕು ನಿವಾ ರಣೆಗೆ ಶ್ರಮಿಸುತ್ತಿರುವ ಅವರಿಗೆ ಸಮರ್ಪಕ ವಾದ ರಕ್ಷಣಾ ಪರಿಕರಗಳನ್ನು ಒದಗಿಸ ಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳು ಆಶಾ ಕಾರ್ಯಕರ್ತೆಯರಿಗೆ ಘೋಷಣೆ ಮಾಡಿರುವ ಪ್ಯಾಕೇಜ್‍ನ ಸಂಪೂರ್ಣ ಸಹಾಯಧನವನ್ನು ಕೂಡಲೇ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಸಿಕ 12 ಸಾವಿರ ರೂ. ವೇತನ ನಿಗ ದಿಗೆ ಆಗ್ರಹಿಸಿ ಕಳೆದ ಜನವರಿಯಲ್ಲಿ ಬೆಂಗ ಳೂರಿನಲ್ಲಿ ಬೃಹತ್ ಹೋರಾಟ ಮಾಡಲಾ ಗಿದೆ. ಈ ವೇಳೆ ಆರೋಗ್ಯ ಸಚಿವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ, ಕಳೆದ ಮಾರ್ಚ್‍ನಿಂದ ಹಲವು ಬಾರಿ ರಾಜ್ಯ ವ್ಯಾಪಿ ಹೋರಾಟ ಮಾಡಿ 10 ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಬೇಡಿಕೆ ಈಡೇರಿ ಸಲು ಮುಂದಾಗಿಲ್ಲ ಎಂದು ಆರೋಪಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಶುಭಮಂಗಳಾ ಮಾತನಾಡಿ, ಜೂ.30ರಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರ ಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅದರಂತೆ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಅಂದು ಬೆಳಿಗ್ಗೆ 10.30ಕ್ಕೆ ಪ್ರತಿಭಟನೆ ನಡೆಸಲಾಗುವುದು. ಬಳಿಕ ವಾರ ಕಾಲ ವಿವಿಧ ರೀತಿ ಪ್ರತಿಭಟನೆ ನಡೆಸಲಾಗು ವುದು. ಸರ್ಕಾರ ಸ್ಪಂದಿಸದಿದ್ದರೆ, ಜು.10 ರಿಂದ ರಾಜ್ಯಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಎಚ್ಚರಿಸಿದರು.

ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ವೇತನವೆಂದು ಪರಿಗಣಿಸಿ ಮಾಸಿಕ ಕನಿಷ್ಠ 12 ಸಾವಿರ ರೂ. ವೇತನ ನೀಡಬೇಕು. ಗೌರವಧನದ ಹೆಸರಿನಲ್ಲಿ ಬಿಡಿಗಾಸು ನೀಡುವುದನ್ನು ನಿಲ್ಲಿಸಬೇಕು. ದುಡಿಮೆಗೆ ತಕ್ಕ ವೇತನ, ಸೌಲಭ್ಯ ಕಲ್ಪಿಸಬೇಕು. ಕಾರ್ಯಕರ್ತೆಯ ರಿಗೆ ಕೊರೊನಾ ಸೋಂಕು ತಪಾಸಣೆ ನಡೆಸಿ, ಪಾಸಿಟಿವ್ ಕಂಡುಬರುವವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಗಳಾದ ಭಾಗ್ಯ, ಸುನೀತಾ ಗೋಷ್ಠಿಯಲ್ಲಿದ್ದರು.

Translate »