ಮೈಸೂರಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

June 2, 2019

ಮೈಸೂರು: ಹಲವು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನ ಹಾಗೂ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆ ಯರು ಇಂದು ಮೈಸೂರಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಯುಸಿ ಆಶ್ರಯದಲ್ಲಿ ಮೈಸೂರಿನ ಹಾರ್ಡಿಂಗ್ ಸರ್ಕಲ್ ಬಳಿ ಸಮಾಗಮಗೊಂಡ 150ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆ ಯರು, ನಂತರ ನಜರ್‍ಬಾದ್ ಮುಖ್ಯ ರಸ್ತೆ, ಎಸ್ಪಿ ಆಫೀಸ್ ಸರ್ಕಲ್ ಮೂಲಕ ಜಾಥಾ ನಡೆಸಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ತಲುಪಿದರು. ಘೋಷಣಾ ಫಲಕ ಪ್ರದರ್ಶಿಸಿ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಹಕ್ಕೊತ್ತಾಯಗಳನ್ನೊಳಗೊಂಡ ಮನವಿ ಪತ್ರವನ್ನು ಕಚೇರಿ ಅಧೀಕ್ಷಕರಿಗೆ ಸಲ್ಲಿಸಿದರು. ಸಂಘದ ಮೈಸೂರು ಜಿಲ್ಲಾ ಸಮಿತಿಯ ಜಿ.ಎಸ್.ಸೀಮಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Translate »