ಮುಖ್ಯಮಂತ್ರಿಗಳೇ ಮೌನ ಮುರಿಯಿರಿ… ನಮ್ಮ ಬೇಡಿಕೆಗಳ ಬಗ್ಗೆ ಮಾತನಾಡಿ
ಮೈಸೂರು

ಮುಖ್ಯಮಂತ್ರಿಗಳೇ ಮೌನ ಮುರಿಯಿರಿ… ನಮ್ಮ ಬೇಡಿಕೆಗಳ ಬಗ್ಗೆ ಮಾತನಾಡಿ

July 28, 2020

ಮೈಸೂರು, ಜು.27(ಆರ್‍ಕೆಬಿ)- ಮಾಸಿಕ ಗೌರವಧನ ಹೆಚ್ಚಿಸಬೇಕು. ಕೋವಿಡ್-19ರ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಸುರಕ್ಷತಾ ಸಾಮಗ್ರಿ ಒದಗಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿಯ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು 18ನೇ ದಿನವಾದ ಇಂದೂ ಮೈಸೂರಿನ ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಯನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ. ಮುಖ್ಯಮಂತ್ರಿಗಳು ಮೌನ ವಹಿಸಿದ್ದಾರೆ. ಅಲ್ಲದೆ ಈಗಾಗಲೇ ಆಶಾ ಕಾರ್ಯಕರ್ತೆ ಯರಿಗೆ 11 ಸಾವಿರ ರೂ. ನೀಡುತ್ತಿರುವುದಾಗಿ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳಿ ಮುಷ್ಕ ರದ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗು ತ್ತಿರುವ ಬಗ್ಗೆ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ಪಾಸ್ ಪುಸ್ತಕ ಪ್ರದರ್ಶಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯ ಕರ್ತೆಯರ ಸಂಘ, ಎಐಟಿಯುಸಿ ಆಶ್ರಯ ದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿ ಸಿದ್ದ ಎಐಯುಟಿಯುಸಿ ಜಿಲ್ಲಾ ಕಾರ್ಯ ದರ್ಶಿ ಚಂದ್ರಶೇಖರ ಮೇಟಿ ಈ ಸಂದರ್ಭ ದಲ್ಲಿ ಮಾತನಾಡಿ, 18 ದಿನಗಳಿಂದ ಪ್ರತಿ ಭಟನೆ ನಡೆಸುತ್ತಿದ್ದು, ಮನವಿ ಪತ್ರಗಳನ್ನು ಕೊಟ್ಟು ಸಾಕಾಗಿದೆ. ಕೊಟ್ಟ ಮನವಿಗಳೆಲ್ಲ ವನ್ನೂ ಗಮನಿಸದ ಸರ್ಕಾರ ಅದನ್ನು ಕಸದ ಬುಟ್ಟಿಗೆ ಬಿಸಾಡುವ ಮೂಲಕ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ನಿರ್ಲ ಕ್ಷಿಸಿದೆ. ಮುಷ್ಕರನಿರತ ಕೊರೊನಾ ವಾರಿ ಯರ್ಸ್‍ಗಳ ಬೇಡಿಕೆ ಈಡೇರಿಸಬೇಕಾದ ಮುಖ್ಯಮಂತ್ರಿಗಳು ಯಾವುದೇ ಹೇಳಿಕೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ನಿರ್ಲóಕ್ಷ್ಯ ಧೋರಣೆ ಖಂಡಿಸಿ ಆಶಾ ಕಾರ್ಯಕರ್ತೆಯರು ಜು.29ರಂದು `ಮುಖ್ಯಮಂತ್ರಿಗಳೇ ಮೌನ ಮುರಿಯಿರಿ’ ಎಂಬ ಘೋಷಣೆಯೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಿದ್ದಾರೆ. ಅದೇ ದಿನ ರಾಜ್ಯಾ ದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳಿಗೂ ಆಶಾ ಕಾರ್ಯಕರ್ತೆಯರು ಮುತ್ತಿಗೆ ಹಾಕ ಲಿದ್ದಾರೆ ಎಂದರು. ಪ್ರತಿಭಟನಾ ಸ್ಥಳಕ್ಕೆ ಆಗ ಮಿಸಿದ ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಆರೋಗ್ಯ ಅಧಿಕಾರಿ ಡಾ. ಮಹದೇವಪ್ರಸಾದ್, ಯೋಜನಾಧಿಕಾರಿ ಸಿರಾಜ್ ಅಹಮದ್ ಪ್ರತಿಭಟನಾಕಾರರಿಂದ ಮಾಹಿತಿ ಪಡೆದು, ಡಿಹೆಚ್‍ಓ ಗಮನಕ್ಕೆ ತರುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ಶುಭಮಂಗಳಾ, ಸುನಿತಾ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳ ಪ್ರತಿಭಟನೆ
ಮೈಸೂರು, ಜು.27(ಆರ್‍ಕೆಬಿ)- ಕನಿಷ್ಠ ಮಾಸಿಕ ವೇತನ 12,000 ರೂ. ಗೌರವ ಧನ ನೀಡಬೇಕು ಮತ್ತು ಕೋವಿಡ್ ವಿರುದ್ಧ ಹೋರಾಡಲು ಸಮರ್ಪಕ ಪಿಪಿಇ ಕಿಟ್ ಪೂರೈಸಬೇಕು ಎಂದು ಒತ್ತಾಯಿಸಿ ಕಳೆದ 18 ದಿನಗಳಿಂದ ಮುಷ್ಕರ ನಡೆಸು ತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟ ಬೆಂಬಲಿಸಿ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‍ಓ), ಆಲ್ ಇಂಡಿಯಾ ಡೆಮಾ ಕ್ರಟಿಕ್ ಯೂತ್ ಆರ್ಗನೈಜೇಷನ್ (ಎಐಡಿವೈಓ), ಆಲ್ ಇಂಡಿಯಾ ಮಹಿಳಾ ಸಾಂಸ್ಕøತಿಕ ಸಂಘಟನೆ (ಎಐಎಂಎಸ್‍ಎಸ್) ಹೀಗೆ ನಾನಾ ಸಂಘಟನೆಗಳು ಇಂದು ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದವು.

ರಾಜ್ಯಾದ್ಯಂತ ಅನಾರೋಗ್ಯ ಪೀಡಿತರು, ಬಾಣಂತಿಯರು, ಗರ್ಭಿಣಿ ಹೆಣ್ಣು ಮಕ್ಕಳ ಆರೋಗ್ಯವನ್ನು ಕಾಪಾಡುವುದರಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು, ಹಗಲು ರಾತ್ರಿ ಎನ್ನದೆ ಅದರಲ್ಲೂ ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯ ಜನರ ಆರೋಗ್ಯ ರಕ್ಷಣೆಯಲ್ಲಿ ತೊಡಗಿದ್ದಾರೆ. ತಮ್ಮ ಆರ್ಥಿಕ ಸಂಕಷ್ಟದ ನಡುವೆಯೂ ಕೋವಿಡ್-19 ವಿರುದ್ಧ ತಮ್ಮ ಜೀವವನ್ನು ಪಣಕ್ಕಿಟ್ಟು ಹಳ್ಳಿಹಳ್ಳಿಗೂ ಸಂಚರಿಸಿ, ಸರ್ವೆ ನಡೆಸಿ, ಕೊರೊನಾ ವಾರಿಯರ್ಸ್‍ಗಳಾಗಿ ಮಾನವೀಯ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಕನಿಷ್ಠ ಗೌರವಧನ ಹಾಗೂ ಸಮರ್ಪಕ ಆರೋಗ್ಯ ರಕ್ಷಾ ಕಿಟ್‍ಗಳನ್ನು ನೀಡದೇ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸು ತ್ತಿದೆ ಎಂದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕು. 12 ಸಾವಿರ ರೂ. ಕನಿಷ್ಠ ಗೌರವ ಧನ ನೀಡಬೇಕು. ಸಮರ್ಪಕ ಆರೋಗ್ಯ ರಕ್ಷಾ ಕಿಟ್ ಗಳನ್ನು ಪೂರೈಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆ ಯಲ್ಲಿ ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಎಐಎಂಎಸ್‍ಎಸ್ ಜಿಲ್ಲಾ ಕಾರ್ಯದರ್ಶಿ ಜಿ.ಎಸ್.ಸೀಮಾ, ಎಐಡಿವೈಒ ಜಿಲ್ಲಾಧ್ಯಕ್ಷ ಎಸ್.ಹೆಚ್. ಹರೀಶ್, ಎಯುಪಿಡಬ್ಲ್ಯೂಎ ಡಾ.ರತಿರಾವ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು

Translate »