ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

September 23, 2020

ಮೈಸೂರು, ಸೆ.22(ಆರ್‍ಕೆಬಿ)- ಮಾಸಿಕ ರೂ.12,000 ಸಂಬಳ ಘೋಷಿಸಬೇಕು. ಆಗಾಗ್ಗೆ ಎಲ್ಲಾ ಕಾಂiÀರ್iಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್, ಸ್ಯಾನಿಟೈಸರ್‍ಗಳನ್ನು ಸಮರ್ಪಕವಾಗಿ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆ ಯರ ಸಂಘದ ಜಿಲ್ಲಾ ಸಮಿತಿ ಆಶ್ರಯದಲ್ಲಿ ನಡೆದ ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ಬಾಕಿ ಇರುವ ಪ್ರೋತ್ಸಾಹ ಧನ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಘೋಷಿಸಿರುವ ರೂ.3,000 ಕೋವಿಡ್ ವಿಶೇಷ ಪೆÇ್ರೀತ್ಸಾಹ ಧನವನ್ನು ಇನ್ನೂ ತಲುಪದಿರುವ ಆಶಾ ಕಾರ್ಯಕರ್ತೆಯರಿಗೆ ಪಾವತಿಸಬೇಕು ಎಂದು ಒತ್ತಾಯಿಸಿದರು. ಎಐಟಿಯುಸಿಯ ಮುಖ್ಯಸ್ಥರಾದ ಪಿ.ಎಸ್.ಸಂಧ್ಯಾ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಶುಭಮಂಗಳಾ, ನಗರ ಕಾರ್ಯದರ್ಶಿ ಸುನೀತಾ, ಶೃತಿ, ಶಾರದಮ್ಮ, ಸಿದ್ದಮ್ಮ, ಜಯಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

Translate »