ಉಕ್ರೇನ್‍ನಿಂದ ಬೆಂಗಳೂರಿಗೆ ಬಂದ ವಿದ್ಯಾರ್ಥಿಗಳ ಸ್ವಾಗತಿಸಿದ ಸಚಿವ ಅಶೋಕ್
News

ಉಕ್ರೇನ್‍ನಿಂದ ಬೆಂಗಳೂರಿಗೆ ಬಂದ ವಿದ್ಯಾರ್ಥಿಗಳ ಸ್ವಾಗತಿಸಿದ ಸಚಿವ ಅಶೋಕ್

February 28, 2022

ಬೆಂಗಳೂರು,ಫೆ.27-ವಿದ್ಯಾಭ್ಯಾಸಕ್ಕೆಂದು ಉಕ್ರೇನ್‍ಗೆ ತೆರಳಿದ್ದ ಕರ್ನಾಟಕ ವಿದ್ಯಾರ್ಥಿಗಳ ಪೈಕಿ 13 ಜನರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸಚಿವ ಆರ್.ಅಶೋಕ್ ಸ್ವಾಗತಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿ ವರು, ದೆಹಲಿಯಿಂದ ಇನ್ನೂ 18 ಜನರು ಆಗಮಿಸಲಿ ದ್ದಾರೆ. ರಾಜ್ಯ ಕಂದಾಯ ಇಲಾಖೆಯಿಂದ ಕರ್ನಾಟಕ ಭವನದಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಉಕ್ರೇನ್‍ನಿಂದ ಆಗಮಿಸಿದವರು ಕರ್ನಾ ಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿಗೆ ಬರಲು ಅವರಿಗೆ ಟಿಕೆಟ್ ಬುಕ್ ಮಾಡಲಾಗಿದೆ. ಈ ಕುರಿತು ಸಿಎಂ ಜೊತೆಯೂ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು. ಉಕ್ರೇನ್‍ನ ಕರಕೈನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು.

ರಾಜ್ಯದ ಅಧಿಕಾರಿಗಳು ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಪೆÇೀಷಕರು ಧೈರ್ಯದಿಂದ ಇರಬೇಕು. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಮಕ್ಕಳ ರಕ್ಷಣೆಗೆ ಸಕಲಸಿದ್ಧತೆ ಮಾಡುತ್ತದೆ ಎಂದು ಭರವಸೆ ಕೊಟ್ಟರು. ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಪೆÇೀಷಕರ ಮಡಿಲಿಗೆ ತಲುಪಿಸುವ ತನಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ವಿಶ್ವಾಸದ ಮಾತು ಗಳನ್ನಾಡಿದರು. ನಗರಕ್ಕೆ ಬಂದಿಳಿದ ಶ್ರೇಯಾ ಎಂಬುವವರು ಮಾತನಾಡಿ, ತಾಯ್ನಾಡಿಗೆ ಬಂದಿಳಿದಿದ್ದು ಬಹಳ ಸಂತಸ ತಂದಿದೆ. ಆದರೆ, ನನ್ನ ಸ್ನೇಹಿತರಿನ್ನೂ ಉಕ್ರೇನ್ ನಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲಿನ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರವಾಗಿ ಹದಗೆಡುತ್ತಿದೆ ಎಂದು ಹೇಳಿದ್ದಾರೆ.

Translate »