ವಿಧಾನಸಭಾ ಸಾರ್ವತ್ರಿಕ ಚುನಾವಣೆ; ಅಧಿಸೂಚನೆ ಪ್ರಕಟಣೆಯೊಂದಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ
ಮೈಸೂರು

ವಿಧಾನಸಭಾ ಸಾರ್ವತ್ರಿಕ ಚುನಾವಣೆ; ಅಧಿಸೂಚನೆ ಪ್ರಕಟಣೆಯೊಂದಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

April 13, 2023

ಮೈಸೂರು, ಏ. 12(ಆರ್‍ಕೆ)- ಕರ್ನಾ ಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಳೆ (ಏ.13) ಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾ ವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣೆಗೆ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.
ಗುರುವಾರ ಅಧಿಸೂಚನೆ ಹೊರಡಿ ಸಲಿದ್ದು, ಏಪ್ರಿಲ್ 13 ರಿಂದ ಏಪ್ರಿಲ್ 20ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು ಎಂದು ಅವರು ತಿಳಿಸಿದರು. ಏ.21ರಂದು ನಾಮಪತ್ರಗಳ ಪರಿಶೀಲನೆ, ಏ.24 ರಂದು ಉಮೇದು ವಾರಿಕೆ ವಾಪಸ್ ಪಡೆಯಲು ಕಡೇ ದಿನ ವಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ರಂದು ಮೈಸೂ ರಿನ ವಾಲ್ಮೀಕಿ ರಸ್ತೆಯಲ್ಲಿರುವ ಮಹಾ ರಾಣಿ ಸರ್ಕಾರಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ. ಅಂದು ಮಧ್ಯಾಹ್ನದ ವೇಳೆಗೆ ಫಲಿ ತಾಂಶ ಹೊರಬೀಳುವ ನಿರೀಕ್ಷೆ ಇದೆ.

26,38,487 ಮತದಾರರು

ಮೈಸೂರು ಜಿಲ್ಲೆಯಲ್ಲಿ ಏ.12ರಲ್ಲಿ ದ್ದಂತೆ 13,29,493 ಮಹಿಳೆಯರು, 13,08,771 ಪುರುಷರು, 223 ಇತರರು ಸೇರಿ ಒಟ್ಟು 26,38,487 ಮತದಾರರಿ ದ್ದಾರೆ. ಒಟ್ಟು 2905 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.

ವೆಚ್ಚಗಳ ಮೇಲೆ ನಿಗಾ: ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಜಿಲ್ಲೆಯಾ ದ್ಯಂತ 242 ಸೆಕ್ಟರ್ ಅಧಿಕಾರಿಗಳು, 51 ಫ್ಲೈಯಿಂಗ್ ಸ್ಕ್ವಾಡ್, 53 ಸ್ಪ್ಯಾಟಿಕ್ ಸರ್ವೇಲೆನ್ಸ್ ಟೀಂ, 12 ವೀಡಿಯೋ ಸರ್ವೇಲೆನ್ಸ್ ಟೀಂ, 11 ವೀಡಿಯೋ ವೀವಿಂಗ್ ಟೀಂ, 11 ಅಕೌಂಟಿಂಗ್ ಟೀಂ ಹಾಗೂ 17 ಸಹಾಯಕ ಚುನಾವಣಾ ವೀಕ್ಷಕರನ್ನು ನಿಯೋಜಿಸಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳಿಗೊಬ್ಬರಂತೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯನ್ನು ಮಾದರಿ ನೀತಿ ಸಂಹಿತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ನಾಮಪತ್ರ ಸಲ್ಲಿಸುವಾಗ…: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರವನ್ನು ಭರ್ತಿ ಮಾಡಿ ನಮೂನೆ-2ಬಿ ಯಲ್ಲಿ ಸಲ್ಲಿಸಬೇಕು. ನಮೂನೆ-26ರಲ್ಲಿ ನೋಟರಿ ಅವರಿಂದ ದೃಢೀಕರಿಸಿದ ಅಫಿಡವಿಟ್ ಸಲ್ಲಿಸಬೇಕು. 25 ವರ್ಷಕ್ಕಿಂತ ಕಡಿಮೆ ಇರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಮಾನ್ಯತೆ ಪಡೆದ ರಾಜಕೀಯ ಪಕ್ಷದ ಅಭ್ಯರ್ಥಿ ಯಾಗಿದ್ದಲ್ಲಿ ಒಬ್ಬರು ಸೂಚಕರು, ಪಕ್ಷೇತರ ಅಭ್ಯರ್ಥಿಯಾದಲ್ಲಿ 10 ಮಂದಿ ಸೂಚಕರಿರಬೇಕು. ರಾಜಕೀಯ ಪಕ್ಷಗಳ ಅಭ್ಯರ್ಥಿಯಾದಲ್ಲಿ ನಮೂನೆ-3 ಮತ್ತು ಬಿ ಅನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.
ಅಭ್ಯರ್ಥಿಯಾಗ ಬಯಸುವವರು 10,000 ರೂ. ಠೇವಣಿ ಹಣ ಪಾವತಿಸಬೇಕು. ಎಸ್ಸಿ-ಎಸ್ಟಿಗೆ ಸೇರಿದವರು 5000 ರೂ.ಗಳನ್ನು ಪಾವತಿಸಬೇಕು. ನಾಮಪತ್ರ ಸಲ್ಲಿಸು ವಾಗ ಅಭ್ಯರ್ಥಿ ಸೇರಿ 5 ಮಂದಿ ಮಾತ್ರ ಚುನಾವಣಾಧಿಕಾರಿ ಕಚೇರಿಗೆ ಪ್ರವೇಶಿಸುವುದು. ಒಬ್ಬ ಅಭ್ಯರ್ಥಿಯು 40 ಲಕ್ಷ ರೂ.ಗಳವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿರುತ್ತದೆ. ಚುನಾವಣಾ ವೆಚ್ಚದ ಮೇಲೆ ನಿಗಾ ಇರಿಸಲು 9 ಮಂದಿ ವೆಚ್ಚ ವೀಕ್ಷಕರನ್ನು ಭಾರತ ಚುನಾವಣಾ ಆಯೋಗವು ನೇಮಿಸಿದೆ.

15,128 ಅಧಿಕಾರಿಗಳು: ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳಿಗೆ 2,905 ಮತಗಟ್ಟೆಗಳಿಗೆ 3,782 ಪಿಆರ್‍ಓ, 3782 ಎಪಿಆರ್‍ಓ, 7,564 ಪಿಓ ಸೇರಿ ಒಟ್ಟು 15,128 ಮಂದಿಯನ್ನು ಮತದಾನ ಪ್ರಕ್ರಿಯೆಗೆ ನಿಯೋಜಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಮತದಾನಾಧಿಕಾರಿ ಗಳಿಗೆ ತರಬೇತಿ ನೀಡಲಾಗುವುದು. ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವಾಗದಂತೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ. ರಮೇಶ್, ಎಸ್ಪಿ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತರೆಡ್ಡಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »