`ರೈತ ಶಕ್ತಿ’ ಮೂಲಕ ಅನ್ನದಾತರಿಗೆ ನೆರವು
News

`ರೈತ ಶಕ್ತಿ’ ಮೂಲಕ ಅನ್ನದಾತರಿಗೆ ನೆರವು

March 5, 2022

ಬೆಂಗಳೂರು, ಮಾ.4(ಕೆಎಂಶಿ)-ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯಕ್ಕೆ ಒಂದಷ್ಟು ಪರಿ ಹಾರ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷಿ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡಿದ್ದಾರೆ. ವಿಧಾನಸಭೆಯಲ್ಲಿಂದು 2022-23ನೇ ಸಾಲಿನ ಮುಂಗಡಪತ್ರದಲ್ಲಿ ‘ರೈತ ಶಕ್ತಿ’ ನೂತನ ಯೋಜನೆಯಡಿ ಕೃಷಿ ಯಂತ್ರೋ ಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ; 600 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಹಂಚಿಕೆ ಮಾಡಿರುವ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ ಮಾಡಲಿದ್ದಾರೆ. ಬಡ್ಡಿ ರಿಯಾಯಿತಿ ಯೋಜನೆಯಡಿ 3 ಲಕ್ಷ ಹೊಸ ರೈತರೂ ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ ನೀಡಿದ್ದಾರೆ. ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕøತ ರೂಪದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ. ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ ನೀಡಿದ್ದಾರೆ. 57 ತಾಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ-2.0 ಜಾರಿ. ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪೆÇ್ರೀತ್ಸಾಹ ಧನ, ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತ್ಯೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನ ಹಳ್ಳಿಯಲ್ಲಿ 15 ಕೋಟಿ ರೂ.ಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ.

ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪೆÇ್ರೀತ್ಸಾಹಧನ. ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ. ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಷೇರು ಬಂಡವಾಳ. 50 ಕೋಟಿ ರೂ. ಅನುದಾನ ನೀಡಿದ್ದಾರೆ. ಗೋಶಾಲೆಗಳಲ್ಲಿನ ಗೋವುಗಳ ದತ್ತು ಪೆÇ್ರೀತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ.

Translate »