ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಪುತ್ತೂರಿನ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸಂಘ, ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಸಹಯೋಗದಲ್ಲಿ ಆಗಸ್ಟ್, 5 ರಂದು ಬೆಳಗ್ಗೆ 9 ಗಂಟೆಗೆ ಪುತ್ತೂರಿನ ತೆಂಕಿಲದ ಒಕ್ಕಲಿಗಗೌಡ ಸಮುದಾಯ ಭವನದಲ್ಲಿ ಆಟಿ ಹಬ್ಬ 2018 ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ, 9.30 ಗಂಟೆಗೆ ಆಟೋಟ ಸ್ಪರ್ಧೆ, ಮಧ್ಯಾಹ್ನ 12 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಮಧ್ಯಾಹ್ನ 2 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸಿ.ಪಿ.ಜಯರಾಮ್ ಇತರರು ಪಾಲ್ಗೊಳ್ಳಲಿದ್ದಾರೆ.