ಕೆಎಸ್‍ಆರ್‍ಟಿಸಿ ನಿರ್ವಾಹಕನ ಮೇಲೆ ಹಲ್ಲೆ
ಚಾಮರಾಜನಗರ

ಕೆಎಸ್‍ಆರ್‍ಟಿಸಿ ನಿರ್ವಾಹಕನ ಮೇಲೆ ಹಲ್ಲೆ

October 28, 2018

ಚಾಮರಾಜನಗರ: ಇಳಿಯಬೇಕಾಗಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಪ್ರಯಾಣಿಕನೊಬ್ಬ ಕೆಎಸ್‍ಆರ್‍ಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ದೊಡ್ಡರಾಯಪೇಟೆ ಕ್ರಾಸ್‍ನಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ನಿವಾಸಿ ಮಹದೇವಸ್ವಾಮಿ ಹಲ್ಲೆ ಮಾಡಿದವರು. ನಿರ್ವಾಹಕ ನಾಗ ಮಲ್ಲೇಶ್ ಹಲ್ಲೆಗೆ ಒಳಗಾಗಿ ಗಾಯಗೊಂಡವರು. ಹಲ್ಲೆ ನಡೆಸಿದ ಮಹದೇವಸ್ವಾಮಿಯನ್ನು ಸಹ ಪ್ರಯಾಣಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Translate »