ಮೈಸೂರು: ವಕೀಲರ ರಕ್ಷಣೆ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಆಗ್ರಹಿಸಿ ಮೈಸೂರು ವಕೀಲರ ಸಂಘದ ವತಿಯಿಂದ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮೈಸೂರು ಜಿಲ್ಲಾ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಸಮಾ ವೇಶಗೊಂಡ ವಕೀಲರು ಅಲ್ಲಿಂದ ಕೃಷ್ಣ ರಾಜ ಬುಲೇವಾರ್ಡ್ ರಸ್ತೆಯಲ್ಲಿ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಕೀಲರು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ ಕುಮಾರ್ ನೇತೃತ್ವದಲ್ಲಿ ಫೆ.12ರಂದು ತುರ್ತು ವಿಶೇಷ ಸದಸ್ಯರ ಸಭೆ ನಡೆಸ ಲಾಯಿತು. ಸಭೆ ಯಲ್ಲಿ ಹಲವು ನಿರ್ಣಯ ಗಳನ್ನು ಕೈಗೊಳ್ಳಲಾ ಯಿತು. ಭಾರತೀಯ ವಕೀಲರ ಪರಿಷತ್ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘವು ಅವರ ಕರೆಗೆ ಬೆಂಬಲ ಸೂಚಿಸಿ ಮಂಗಳ ವಾರ ನ್ಯಾಯಾಲಯಗಳ ಕಲಾಪಗಳಿಂದ ಹೊರಗುಳಿದು ಪ್ರತಿಭಟನೆ ವ್ಯಕ್ತಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಭಾರತೀಯ ವಕೀಲರ ಪರಿಷತ್ ತೆಗೆದು ಕೊಂಡ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರಮೋದಿ ಅವರಿಗೆ ರಾಜ್ಯ ಪಾಲರ ಮೂಲಕ ಕಳುಹಿಸಲು ಸಭೆ ನಿರ್ಣಯ ಕೈಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ಜಿ.ಪ್ರಕಾಶ್, ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವವರೂ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದಾರೆ. ಇವರಿಗೆ ಸೂಕ್ತ ಮೂಲ ಸೌಕರ್ಯ ಒದಗಿಸ ಬೇಕಿದೆ. ಅಂತೆಯೇ ರಕ್ಷಣಾ ಕಾಯ್ದೆ ಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿ ಸಬೇಕು ಎಂದು ತಿಳಿಸಿದರು. ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಆನಂದ ಕುಮಾರ್, ಉಪಾಧ್ಯಕ್ಷ ಎಸ್.ಜಿ.ಶಿವಣ್ಣ ಗೌಡ, ಕಾರ್ಯದರ್ಶಿ ಬಿ.ಶಿವಣ್ಣ, ಜಂಟಿ ಕಾರ್ಯದರ್ಶಿಗಳಾದ ಸಿ.ಕೆ.ರುದ್ರ ಮೂರ್ತಿ, ಎಂ.ಮನೋಮಣಿ, ಖಜಾಂಚಿ ಜಿ.ಪಿ. ಚಂದ್ರಶೇಖರ್ ಇನ್ನಿತರರು ಭಾಗವಹಿಸಿದ್ದರು.