ಆ.5, ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಪರೀಕ್ಷೆ
ಕೊಡಗು

ಆ.5, ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಪರೀಕ್ಷೆ

August 1, 2018

ಮಡಿಕೇರಿ:  ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಆಗಸ್ಟ್ 5ರಂದು ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ಪ್ರವೇಶ/ಹಾಜರಾತಿ ಪತ್ರವನ್ನು ಪೊಲೀಸ್ ಅಂತರ್ಜಾಲದಲ್ಲಿ www.ksp.gov.in ಪಡೆದು ಅದರಲ್ಲಿ ನಿಗದಿ ಪಡಿಸಿರುವ ಭಾವಚಿತ್ರವಿರುವ ದಾಖಲೆಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ.

Translate »