ಶ್ರೀ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಮತ್ತು ದೇಜಗೌ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕುವೆಂಪು ಜಯಂತಿ ಹಾಗೂ ವಿಶ್ವ ಮಾನವ ದಿನಾಚರಣೆಯಲ್ಲಿ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಶಾಸಕ ಎಲ್.ನಾಗೇಂದ್ರ ಪ್ರದಾನ ಮಾಡಿದರು. ಹಿರಿಯ ಸಾಹಿತಿ ಡಾ.ಕೆ.ವಿ. ನಾರಾಯಣ ಅವರಿಗೆ `ವಿಶ್ವ ಮಾನವ ಪ್ರಶಸ್ತಿ’, ಹಿರಿಯ ವಿದ್ವಾಂಸ ಡಾ.ಎಂ.ಚಿದಾನಂದ ಮೂರ್ತಿ ಅವರಿಗೆ `ಕರ್ನಾಟಕ ರತ್ನ ನಾಡೋಜ ಡಾ.ದೇಜಗೌ ಪ್ರಶಸ್ತಿ ಹಾಗೂ ಪತ್ರಕರ್ತ ಎಸ್.ನಾಗಣ್ಣ ಅವರಿಗೆ `ದಿವಂಗತ ಹೆಚ್.ಕೆ.ವೀರಣ್ಣಗೌಡ ಪತ್ರಿಕೋ ದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುವೆಂಪು ವಿದ್ಯಾವರ್ಧಕ ಟ್ರಸ್ಟ್‍ನ ಅಧ್ಯಕ್ಷ ಡಾ.ಜೆ.ಶಶಿಧರ ಪ್ರಸಾದ್ ಮತ್ತಿತರರು ಹಾಜರಿದ್ದರು.