ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ
ಚಾಮರಾಜನಗರ

ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ

July 29, 2018

ಚಾಮರಾಜನಗರ:  ‘ಆಧುನಿಕ ಸಮಾಜದಲ್ಲಿ ವಿದ್ಯಾವಂತ ಯುವ ಜನರೇ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು, ಇದರ ಪರಿಹಾರಕ್ಕೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಹೇಳಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ಔಷಧ ವಿಪತ್ತು ನಿರ್ಮೂ ಲನೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ದಾಗ 16ರಿಂದ 22ರ ವಯೋಮಿತಿಯ ಯುವ ಜನರು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಚಟಕ್ಕೆ ಒಳಗಾಗಿರುವುದು ಆತಂಕಕಾರಿ ವಿಷಯವಾಗಿದೆ. ಅದರಲ್ಲೂ ಅಕ್ಷರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳ ಬಳಕೆಗೆ ಮುಂದಾ ಗಿರುವುದು ಕಂಡುಬಂದಿದೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವ ಜನರು ಅಪಾಯಕಾರಿ ವ್ಯಸನಕ್ಕೆ ಮೊರೆಹೋಗಿರು ವುದಕ್ಕೆ ವ್ಯಾಪಕವಾಗಿ ಅರಿವು ಮೂಡಿಸಿ ಸರಿದಾರಿಯಲ್ಲಿ ತರಬೇಕಿದೆ ಎಂದರು.

18 ವರ್ಷ ಒಳಪಟ್ಟವರಿಗೆ ಧೂಮಪಾನ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಇದಕ್ಕಾಗಿ ಕಾಯ್ದೆ ಸಹ ತರಲಾಗಿದೆ. ಮದ್ಯ, ಮಾದಕ ವಸ್ತುಗಳ ಮೋಹಕ್ಕೆ ಬಲಿಯಾಗಿ ಜೀವನ ಹಾಳುಮಾಡಿಕೊಳ್ಳುವ ಯುವ ಜನರನ್ನು ಎಚ್ಚರಿಸಿ ಮುಖ್ಯವಾಹಿನಿಗೆ ತರುವ ಕೆಲಸವನ್ನು ಆದ್ಯತೆ ಮೇಲೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹ ಜಾಗೃತಿ ಮೂಡಿ ಸಲು ಕಾರ್ಯಾಗಾರಗಳನ್ನು ಆಯೋಜನೆ ಮಾಡುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ಮಾತ ನಾಡಿ, ಯುವಶಕ್ತಿ ದೇಶದ ಅಮೂಲ್ಯ ಆಸ್ತಿ. ಇಂತಹ ಯುವ ಜನರನ್ನು ಮಾದಕ ಔಷಧ, ವಸ್ತುಗಳನ್ನು ನೀಡಿ ದಾರಿ ತಪ್ಪಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಎಚ್ಚರವಹಿಸಬೇಕಿದೆ. ಉತ್ತಮ ಸಮಾಜ ನಿರ್ಮಾಣ ಮಾಡಲು ಯುವ ಜನರಿಗೆ ಮಾರ್ಗದರ್ಶನ ಮಾಡಬೇಕಿದೆ ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಗೀತಾ ಪ್ರಸನ್ನ ಮಾತನಾಡಿ, ಬದ ಲಾದ ಆಧುನಿಕ ಜೀವನ ಶೈಲಿಯು ಮಾದಕ ವಸ್ತುಗಳ ಬಗ್ಗೆ ಯುವಜನರನ್ನು ಆಕರ್ಷಿಸುತ್ತಿದೆ. ನಗರ ಪ್ರದೇಶಗಳಲ್ಲಿ ಪೋಷಕರ ಪ್ರೀತಿ ವಾತ್ಸಲ್ಯದಿಂದ ವಂಚಿತರಾದವರು, ಸಹಪಾಠಿಗಳ ಪ್ರಭಾವಕ್ಕೆ ಒಳಗಾಗುವರು ಕೆಟ್ಟ ಹವ್ಯಾಸಗಳನ್ನು ರೂಢಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಜೀವನ ದಲ್ಲಿ ವ್ಯಾಸಂಗಕ್ಕೆ ಮಾತ್ರ ಮಹತ್ವ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದೊರೆತು ನೆಮ್ಮದಿಯ ಬದುಕು ಸಾಗಿಸಬಹುದು ಎಂದು ಸಲಹೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಎಂ. ತಿರುಮ ಲೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಇಂದುಶೇಖರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾ ಯಕ ನಿರ್ದೇಶಕ ಎ.ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ ಜಯ ಶೀಲ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಅರುಣ್‍ಕುಮಾರ್, ಬಾಲನ್ಯಾಯಮಂಡಳಿ ಸದಸ್ಯರಾದ ಟಿ.ಜೆ.ಸುರೇಶ್ ಹಾಜರಿದ್ದರು.

Translate »