ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಜನಪದ ಕಲೆಗಳ ಮೂಲಕ ಜಾಗೃತಿ
ಮೈಸೂರು

ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಜನಪದ ಕಲೆಗಳ ಮೂಲಕ ಜಾಗೃತಿ

December 10, 2021

ಮೈಸೂರು,ಡಿ.9(ಎಂಟಿವೈ)-ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಪರಿಣಾಮಕಾರಿ ಯಾಗಿ ಜಾಗೃತಿ ಮೂಡಿಸಲು ಜನಪದ ಕಲೆ ಪ್ರಮುಖ ವಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಪ್ರಕಾರಗಳ ಜನಪದ ಕಲೆಗಳ ಕಲಾವಿದರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ತಿಳಿಸಿದ್ದಾರೆ.

ಮೈಸೂರು ತಾಲೂಕಿನ ನಾಗನಹಳ್ಳಿ ಕೃಷಿ ತರ ಬೇತಿ ಕೇಂದ್ರದ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಆಯ್ದ ಜನಪದ ಕಲಾವಿದರ ತರಬೇತಿ ಕಾರ್ಯಾಗಾರ ದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯ ಕ್ರಮಗಳ ಕುರಿತು ವಿವಿಧ ಕಲಾ ಪ್ರಕಾರಗಳ ಮೂಲಕ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸುವುದಕ್ಕೆ ಮೈಸೂರು ವಿಭಾಗದ ಕಲಾವಿದರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಮೈಸೂರು, ಚಿಕ್ಕಮಗಳೂರು, ಹಾಸÀನ, ಮಂಡ್ಯ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ ಜಿಲ್ಲೆಗಳ ವಿವಿಧ ಜನಪದ ಕಲಾತಂಡ ಕಲಾವಿದರು ಪಾಲ್ಗೊಂಡಿದ್ದು, ಆರೋಗ್ಯ ಇಲಾಖೆಯ ಕಾರ್ಯ ಕ್ರಮಗಳ ಬಗ್ಗೆ ಜನರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಯಾವ ಕಲಾ ಪ್ರಕಾರ ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದರು.

ಮೈಸೂರು ವಿಭಾಗದ 8 ಜಿಲ್ಲೆಗಳಲ್ಲಿ ಈ ವರ್ಷ ಸುಮಾರು 1 ಸಾವಿರ ಕಾರ್ಯಕ್ರಮ ಆಯೋಜಿಸಿ, ಆ ಮೂಲಕ ಆರೋಗ್ಯ ಇಲಾಖೆಯ ಕಾರ್ಯಕ್ರಮ ಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವಿದೆ. ಜನರು ಸುಲಭವಾಗಿ ಒಪ್ಪಿಕೊಳ್ಳುವ ಮಾರ್ಗ ಜನ ಪದ ಕಲೆಯದ್ದಾಗಿದೆ. ಸರ್ಕಾರ ಜನರ ಅವಶ್ಯಕತೆಗೆ ತಕ್ಕಂತೆ ಹಲವು ಕಾರ್ಯಕ್ರಮ ಜಾರಿಗೆ ತಂದರೂ, ಅವುಗಳ ಬಗ್ಗೆ ಜನರಿಗೆ ಮಾಹಿತಿ ಇರುವುದಿಲ್ಲ. ಈ ಕೊರತೆಯನ್ನು ನೀಗಿಸಲು ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ಎರಡು ಬಗೆಯ ಕಾರ್ಯ ಕ್ರಮವಿರುತ್ತದೆ. ಖಾಯಿಲೆ ಬಂದಾಗ ಚಿಕಿತ್ಸೆ ಕೊಡು ವುದು ಒಂದು ಬಗೆಯದ್ದಾದರೆ, ಖಾಯಿಲೆ ಬರದಂತೆ ತಡೆಗಟ್ಟುವ ಕಾರ್ಯಕ್ರಮ ರೂಪಿಸುವುದು ಎರಡನೇ ಬಗೆಯ ಕಾರ್ಯಕ್ರಮವಾಗಿದೆ. ಈ ಎರಡು ವಿಧಾ ನದ ಮೂಲಕ ಜನ ಸೇವೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನಪದ ಮೂಲಕ ಜನರಿಗೆ ಆರೋಗ್ಯ ಇಲಾಖೆ ಸಂದೇಶ ತಲುಪಿಸುವುದು ನಮ್ಮ ಉದ್ದೇಶ. ಪ್ರತಿವರ್ಷವೂ ಜನರ ಮೇಲಾಗುವ ದುಷ್ಪರಿಣಾಮ, ಆರೋಗ್ಯ ಸಮಸ್ಯೆ ಬೇರೆ ಬೇರೆ ಸ್ವರೂಪ ಪಡೆಯು ತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷವೂ ತರಬೇತಿ ನೀಡಿ ಮನನ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ವಿಭಾಗೀಯ ಸಹ ನಿರ್ದೇಶಕ ಡಾ.ಉದಯ್‍ಕುಮಾರ್, ಜಿ.ಪಂ ಉಪಕಾರ್ಯದರ್ಶಿ ಪ್ರೇಮನಾಥ್, ಆರೋಗ್ಯ ಇಲಾಖೆ ಉಪನಿರ್ದೇಶಕರಾದ ಡಾ.ಟಿ.ಅಮರನಾಥ್, ಡಾ. ರವಿ, ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ಮಂಜುನಾಥ್, ಆರ್‍ಸಿಹೆಚ್ ಅಧಿಕಾರಿ ಡಾ.ಜಯಂತ್, ವಿಭಾಗೀಯ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಮುನೀಂದ್ರಮ್ಮ, ಎಲ್ಲಾ ಜಿಲ್ಲೆಗಳ ಆರೋಗ್ಯ ಶಿಕ್ಷಣಾಧಿಕಾರಿಗಳು ಪಾಲ್ಗೊಂಡಿದ್ದರು.

Translate »