ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ
ಮೈಸೂರು

ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ

September 28, 2018

ನವದೆಹಲಿ: ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂಬ 1994ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‍ನ ತ್ರಿಸದಸ್ಯ ಪೀಠ ಎತ್ತಿ ಹಿಡಿದಿದೆ.

ಮಸೀದಿಯು ಇಸ್ಲಾಂನ ಅವಿ ಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪಿನ ಪರಿಶೀಲನೆ ಸಂಬಂಧ ಸೆ.27ರಂದು ಮಹತ್ವದ ತೀರ್ಪು ಪ್ರಕಟಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರ, ಅಶೋಕ್ ಭೂಷನ್, ನ್ಯಾ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ನ್ಯಾ.ಅಶೋಕ್ ಭೂಷಣ್ ಹಾಗೂ ನ್ಯಾ. ದೀಪಕ್ ಮಿಶ್ರಾ ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಾಗಿಲ್ಲ ಎಂದು ಅಭಿ ಪ್ರಾಯಪಟ್ಟಿದ್ದು, 1994ರ ಫಾರೂಕಿ ಪ್ರಕರಣದ ತೀರ್ಪನ್ನೇ ಎತ್ತಿ ಹಿಡಿದಿದೆ. ಅಷ್ಟೇ ಅಲ್ಲದೇ 1994ರ ಪ್ರಕರಣದ ತೀರ್ಪಿನ ಅಂಶಗಳನ್ನು ಪರಿಶೀಲಿಸಲು ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಯಾವುದೇ ಧರ್ಮದ ಸ್ಥಳಗಳನ್ನು ಸರ್ಕಾರಗಳು ವಶಕ್ಕೆ ಪಡೆಯಬಹುದು ಎಂಬುದನ್ನೂ ಸುಪ್ರೀಂ ಕೋರ್ಟ್‍ನ ತ್ರಿಸದಸ್ಯ ಪೀಠದ ನ್ಯಾಯಮೂರ್ತಿಗಳು ಹೇಳಿದ್ದಾರೆ. ಇದೇ ವೇಳೆ ಫಾರೂಕಿ ಪ್ರಕರಣದ ತೀರ್ಪನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ನ್ಯಾ.ನಜೀರ್ ಅಭಿಪ್ರಾಯಪಟ್ಟಿದ್ದು, ತೀರ್ಪಿನ ಸಂಬಂಧ ಇನ್ನಿಬ್ಬರು ಸಹೋದ್ಯೋಗಿ ನ್ಯಾಯಮೂರ್ತಿಗಳ ಅಭಿಪ್ರಾಯಕ್ಕೆ ನನ್ನ ಸಹಮತ ಇಲ್ಲ, ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವೇ ಎಂಬ ವಿಷಯವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಹೇಳಿದ್ದಾರೆ.

ರಾಮ ಜನ್ಮಭೂಮಿ ವಿವಾದ: ಅ.29ಕ್ಕೆ ಸುಪ್ರೀಂ ವಿಚಾರಣೆ ಪ್ರಾರಂಭ

ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂ ಧಿಸಿದಂತೆ ಅಕ್ಟೋಬರ್ 29ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಮಸೀದಿಯು ಇಸ್ಲಾಂನ ಅವಿ ಭಾಜ್ಯ ಅಂಗವಲ್ಲ ಎನ್ನುವ 1994ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಈ ಸಂದರ್ಭದಲ್ಲಿ ರಾಮ ಜನ್ಮಭೂಮಿ ವಿವಾ ದಕ್ಕೆ ಸಂಬಂಧಿಸಿದ ವಿಚಾರಣೆ ದಿನಾಂಕ ನಿಗದಿಗೊಳಿಸಿ ಕೋರ್ಟ್ ಆದೇಶ ನೀಡಿದೆ. ಪ್ರಸಕ್ತ ಭಾರತ ಮುಖ್ಯ ನ್ಯಾಯಮೂರ್ತಿ ಗಳಾಗಿರುವ ದೀಪಕ್ ಮಿಶ್ರಾ ಅ.2 ರಂದು ನಿವೃತ್ತರಾಗಲಿದ್ದು, ವಿವಾದಿತ ಜಾಗಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೊಸ ದಾಗಿ ರಚನೆಯಾಗುವ ತ್ರಿಸದಸ್ಯ ಪೀಠ ಆಲಿಸಲಿದೆ. 2010ರ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮ ನವಿ ಅರ್ಜಿ ವಿಚಾರಣೆಯು ಸುಪ್ರೀಂನಲ್ಲಿ ನಡೆಯುತ್ತಿದ್ದು, ಇದರ ಭಾಗವಾಗಿ ಸಿಜೆಐ ಮಿಶ್ರಾ ನೇತೃತ್ವದ ಮೂರು ನ್ಯಾಯಾ ಧೀಶರ ಪೀಠ ಇಂದು (ಗುರುವಾರ) ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವೇ ಎನ್ನುವ ಕುರಿತಂತೆ ಫಾರೂಕಿ ತೀರ್ಪನ್ನೇ ಎತ್ತಿ ಹಿಡಿದಿದೆ. ಅಲಹಾಬಾದ್ ಹೈಕೋರ್ಟ್ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರಾ ಮತ್ತು ರಾಮ್ ಲಾಲ್ಲಾ ಪಕ್ಷ ಗಳಿಗೆ 2.77 ಎಕರೆ ಭೂಮಿಯನ್ನು ಸಮಾನ ವಾಗಿ ವಿಂಗಡಿಸಬೇಕೆಂದು ತೀರ್ಪು ನೀಡಿದ್ದು, ಹೈಕೋರ್ಟ್‍ನ ಮೂವರು ನ್ಯಾಯಾಧೀಶರ ಪೀಠ 2: 1 ಬಹು ಮತದ ಆಧಾರದಲ್ಲಿ ತೀರ್ಪು ಪ್ರಕಟಿಸಿತ್ತು.

Translate »