ನವದೆಹಲಿ, ಡಿ.2- ಅಯೋಧ್ಯೆಯ ರಾಮ ಜನ್ಮಭೂಮಿ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‍ನ ಸಾಂವಿ ಧಾನಿಕ ಪೀಠ ನೀಡಿದ ತೀರ್ಪು ಮರು ಪರಿ ಶೀಲಿಸುವಂತೆ ಕೋರಿ ಜಮಿಯತ್- ಉಲಮಾ -ಇ-ಹಿಂದ್ ಸೋಮವಾರ ಅರ್ಜಿ ಸಲ್ಲಿ ಸಿದೆ. ಡಿಸೆಂಬರ್ 9ರಂದು ವಿವಾದಿತ ಭೂಮಿ ರಾಮಮಂದಿರಕ್ಕೆ, ಮಸೀದಿಗೆ ಪರ್ಯಾಯ ಜಮೀನು ನೀಡಿ ಸಂವಿಧಾನಿಕ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಇಂದು 217 ಪುಟಗಳ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ.
ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟು ಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಜಮಿಯತ್-ಉಲಮಾ-ಇ- ಹಿಂದ್ ಪರ ವಕೀಲರೊಬ್ಬರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಬಾಬ್ರಿ ಮಸೀದಿಯ ನಾಶಕ್ಕೆ ಅವಕಾಶ ನೀಡಿದೆ. ಮುಸ್ಲಿಮರಿಗೆ 5 ಎಕರೆ ಜಾಗವನ್ನು ನೀಡುವ ನಿಟ್ಟಿನಲ್ಲಿ ಸಂವಿಧಾನದ 142 ವಿಧಿಯನ್ನು ತಪ್ಪಾಗಿ ಬಳಸಲಾಗಿದೆ. ಹೀಗೆ ಅನೇಕ ವಿಚಾರವಾಗಿ ಒಟ್ಟು 217 ಪುಟಗಳ ಮೇಲ್ಮನವಿ ಸಲ್ಲಿಸಿ ದ್ದೇವೆ ಎಂದು ಅವರು ತಿಳಿಸಿದ್ದಾರೆ.