ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವೈದ್ಯ ಸೇವೆ: ಕೆ.ಆರ್.ಆಸ್ಪತ್ರೆಗೆ ರಾಜ್ಯದಲ್ಲಿ ಎರಡನೇ ಸ್ಥಾನ
ಮೈಸೂರು

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವೈದ್ಯ ಸೇವೆ: ಕೆ.ಆರ್.ಆಸ್ಪತ್ರೆಗೆ ರಾಜ್ಯದಲ್ಲಿ ಎರಡನೇ ಸ್ಥಾನ

January 3, 2020

ಮೈಸೂರು, ಜ.2(ಎಂಟಿವೈ)- ಆಯು ಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಮೈಸೂರಿನ ಕೆ.ಆರ್. ಆಸ್ಪತ್ರೆ 11,148 ರೋಗಿಗಳಿಗೆ ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದೆ.

2018 ಆಗಸ್ಟ್ ತಿಂಗಳಲ್ಲಿ ಜಾರಿಗೆ ಬಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾ ಟಕ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯಲು ವಿವಿಧ ಆಸ್ಪತ್ರೆಗೆ ರೋಗಿಗಳು ಅರ್ಜಿ ಸಲ್ಲಿಸಿದ್ದರು. 2018ನೇ ಸಾಲಿನಲ್ಲಿ ಕೆ.ಆರ್.ಆಸ್ಪತ್ರೆಯಲ್ಲಿ ಈ ಯೋಜನೆಯಡಿ 1584 ರೋಗಿಗಳು ಚಿಕಿತ್ಸಾ ಸೌಲಭ್ಯ ಪಡೆದು ಕೊಂಡಿದ್ದರೆ, 2019ನೇ ಸಾಲಿನಲ್ಲಿ 11,148 ಮಂದಿ ಯೋಜನೆಯಿಂದ ಉಪಯೋಗ ಪಡೆದುಕೊಂಡಿದ್ದಾರೆ. ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯಡಿ ಜಯದೇವ ಹೃದ್ರೋಗ ಆಸ್ಪತ್ರೆ ಮೊದಲ ಸ್ಥಾನ ಪಡೆದಿದ್ದರೆ, ಕಿದ್ವಾಯಿ ಆಸ್ಪತ್ರೆ ಮೂರನೇ ಸ್ಥಾನ ಪಡೆದಿದೆ.

2016ರಲ್ಲಿ ಯಶಸ್ವಿನಿ ಹಾಗೂ ವಾಜ ಪೇಯಿ ಆರೋಗ್ಯ ಯೋಜನೆಯಡಿ ಕೆ.ಆರ್. ಆಸ್ಪತ್ರೆಯಲ್ಲಿ 941 ಮಂದಿ, 2017ರಲ್ಲಿ 997 ಮಂದಿ ಆರೋಗ್ಯ ಸೇವೆ ಪಡೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಕ್ರಮ ಕೈಗೊಳ್ಳುವ ಮೂಲಕ ಮೈಸೂರು ಹಾಗೂ ನೆರೆ ಹೊರೆಯ ಜಿಲ್ಲೆ ಗಳ ಜನರ ವಿಶ್ವಾಸ ಗಳಿಸಿಕೊಳ್ಳುತ್ತಿರುವ ಕೆ.ಆರ್.ಆಸ್ಪತ್ರೆಗೆ ಇದೀಗ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಯಡಿ ಹೆಚ್ಚಿನ ರೋಗಿಗಳು ಚಿಕಿತ್ಸಾ ಸೌಲಭ್ಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿ 2ನೇ ಸ್ಥಾನ ಪಡೆದು, ತನ್ನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ

 

Translate »