ಡಾ.ಬಾಬು ಜಗಜೀವನ ರಾಂ ಪ್ರತಿಮೆ ಧ್ವಂಸ: ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗ ಖಂಡನೆ
ಮೈಸೂರು

ಡಾ.ಬಾಬು ಜಗಜೀವನ ರಾಂ ಪ್ರತಿಮೆ ಧ್ವಂಸ: ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗ ಖಂಡನೆ

September 3, 2018

ಮೈಸೂರು: ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಪ್ರತಿಮೆ ಧ್ವಂಸಗೊಳಿಸಿ ರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಬಿ.ಪ್ರಸಾದ್ ಖಂಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರು ದಲಿತ ಸಮು ದಾಯದ ಎರಡು ಕಣ್ಣುಗಳಿದ್ದಂತೆ. ಇಂತಹ ಮಹಾನ್ ವ್ಯಕ್ತಿಗಳ ಭಾವಚಿತ್ರಗಳಿಗೆ ಅಪಮಾನ ಮಾಡುವುದು ಹಾಗೂ ಪ್ರತಿಮೆಗಳನ್ನು ಧ್ವಂಸಗೊಳಿಸುವ ಕೃತ್ಯಗಳು ಆಗಾಗ್ಗೆ ನಡೆಯುತ್ತಿದ್ದು, ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಠಿಣ ಕಾನೂನಾತ್ಮಕ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ ನಂಜನಗೂಡು ತಾಲೂಕಿನ ಹುಳಿ ಮಾವು ಗ್ರಾಮದಲ್ಲಿ ಜಗಜೀವನರಾಂ ಅವರ ಪ್ರತಿಮೆ ಧ್ವಂಸಗೊಳಿಸಿದ್ದು, ಇದು ನಾಚಿಕೆಗೇಡಿನ ಸಂಗತಿ. ಈ ಮಹಾನ್ ವ್ಯಕ್ತಿಗಳು ಭಾರತ ದೇಶಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ದೇಶಕ್ಕಾಗಿ ದುಡಿದ ಈ ಮಹಾತ್ಮರಿಗೆ ಅಪ ಮಾನ ಮಾಡುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ರಾಷ್ಟ್ರ ನಾಯಕರು ಹಾಗೂ ದಲಿತ ನಾಯಕರಿಗೆ ಅಪಮಾನ ಮಾಡುವ ಕೃತ್ಯ ಒಂದೆಡೆಯಾದರೆ, ಮತ್ತೊಂದೆಡೆ ದಲಿತ ಸಮುದಾಯದ ಮೇಲೆ ನಿರಂ ತರ ದೌರ್ಜನ್ಯ ನಡೆಯುತ್ತಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಇಂತಹ ದುಷ್ಟಶಕ್ತಿಗಳ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಆಯಾಯ ರಾಜ್ಯ ಸರ್ಕಾರ ಗಳು ಕಠಿಣ ಹಾಗೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದ್ದಾರೆ.

Translate »