ಬೇಬಿ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ
ಮಂಡ್ಯ

ಬೇಬಿ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

June 1, 2018

ಚಿನಕುರಳಿ: ಇಲ್ಲಿನ ಬೇಬಿ ಗ್ರಾಮದ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕ ಕೃಷ್ಣಶೆಟ್ರು (ಕೆ.ಎಸ್) ಅವರು ಗುರುವಾರ ನಿವೃತ್ತರಾದರು. ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ವೃಂದದ ವತಿಯಿಂದ ಮುಖ್ಯ ಶಿಕ್ಷಕ ಕೃಷ್ಣಶೆಟ್ಟರನ್ನು ಸನ್ಮಾನಿಸಿ, ಅವರ ಮುಂದಿನ ಜೀವನ ಸುಖಕರವಾಗಿರಲೀ ಎಂದು ಹಾರೈಸಿ ಬೀಳ್ಕೊಡಲಾಯಿತು.

ಈ ವೇಳೆ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಮು, ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಡಿ.ತಿಮ್ಮೇಗೌಡ, ಕೆ.ಆರ್.ಪೇಟೆ ತಾಲೂಕು ವೃತ್ತಿ ಶಿಕ್ಷಣ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಅಂಕೇಗೌಡ, ಎಸ್‍ಡಿಎಂಸಿ ಅಧ್ಯಕ್ಷ ಪರಶಿವ ಮೂರ್ತಿ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.

Translate »