ನನ್ನ ಸೋಲಿಗೆ ಬಚ್ಚೇಗೌಡ್ರೇ ನೇರ ಕಾರಣ
ಮೈಸೂರು

ನನ್ನ ಸೋಲಿಗೆ ಬಚ್ಚೇಗೌಡ್ರೇ ನೇರ ಕಾರಣ

December 10, 2019

ಬೆಂಗಳೂರು: ನನ್ನ ಸೋಲಿಗೆ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ನೇರ ಕಾರಣ ಎಂದು ಹೊಸಕೋಟೆ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಆರೋ ಪಿಸಿದ್ದಾರೆ. ನಗದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡುತ್ತಾ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರನ ತೀರ್ಪು ಅಂತಿಮ. ಹೀಗಾಗಿ ಹೊಸಕೋಟೆ ಉಪ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ನಾನು ಗೌರವಿಸುತ್ತೇನೆ ಎಂದರು.

ಪ್ರಜಾತಂತ್ರ ವ್ಯವಸ್ಥೆಯ ಮೇಲೆ ವಿಶ್ವಾಸ ಮತ್ತು ನಂಬಿಕೆಯನ್ನಿಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಶರತ್ ಬಚ್ಚೇಗೌಡರಿಗೆ ಬಿಜೆಪಿಯಿಂದ ಟಿಕೆಟ್ ನೀಡಿಲ್ಲವೆಂಬ ಕಾರಣಕ್ಕೆ ಬಂಡಾಯ ವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನನ್ನ ಮೇಲೆ ನಂಬಿಕೆಯಿಟ್ಟು ಸುಮಾರು 71 ಸಾವಿರ ಮತದಾರರು ಮತವನ್ನು ಹಾಕಿದ್ದಾರೆ ಅವರಿಗೆ ಧನ್ಯವಾದಗಳು.

ಬಚ್ಚೇಗೌಡರು ಶಾಸಕರಾಗಿ, ಸಚಿವರಾಗಿ, ಈಗ ಸಂಸದರಾಗಿ ಬಿಜೆಪಿಯಿಂದ ಎಲ್ಲಾ ಅಧಿಕಾರ ವನ್ನು ಅನುಭವಿಸಿ, ಪಕ್ಷದ ಅಧಿಕೃತ ಅಭ್ಯರ್ಥಿ ಯಾದ ನನ್ನ ಪರವಾಗಿ ಕೆಲಸ ಮಾಡದೆ ಮಗನನ್ನ ಬೆಂಬಲಿಸಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಮಗನನ್ನ ಬೆಳೆಸಲು ರಾಜಕೀಯ ದುರುದ್ದೇಶದಿಂದ ಪಕ್ಷದ ಪರ ಕೆಲಸ ಮಾಡದೆ ವೈಯಕ್ತಿಕ ಹಿತಾಸಕ್ತಿ ಇಟ್ಟು ಕೊಂಡು ಕುತಂತ್ರ ನಡೆಸಿದ್ದಾರೆ. ಹೀಗಾಗಿ ಪಕ್ಷಕ್ಕೆ ದ್ರೋಹ ಮಾಡಿರುವ ಬಚ್ಚೇಗೌಡರ ವಿರುದ್ಧ ಈ ಕೂಡಲೇ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಪಕ್ಷದ ಹೈಕಮಾಂಡ್ ಮತ್ತು ರಾಜ್ಯದ ನಾಯಕರಲ್ಲಿ ಈ ಮೂಲಕ ಒತ್ತಾಯ ಮಾಡುವುದಾಗಿ ಹೇಳಿದರು.

Translate »