ಮಾತಿನ ಮನೆಯಲ್ಲಿ ಬಡವ ರಾಸ್ಕಲ್

ಟಗರು ಖ್ಯಾತಿಯ ನಟ ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ‘ಬಡವ ರಾಸ್ಕಲï’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗ ಮಾತ್ರವೇ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಈ ಚಿತ್ರದ ಮಾತಿನ ಮರುಜೋಡಣೆ ಕಾರ್ಯ ನಡೆಯುತ್ತಿದೆ.

ಬೆಂಗಳೂರು, ಮೈಸೂರು ಹಾಗೂ ಪಾಂಡವಪುರ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಧ್ಯಮ ವರ್ಗದ ಜನರ ಪ್ರತಿನಿತ್ಯದ ಜೀವನದಲ್ಲಿ ನಡೆಯುವ ಅನೇಕ ಘಟನೆಗಳೇ ಈ ಚಿತ್ರದ ಪ್ರಮುಖ ಅಂಶವಾಗಿದೆ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿz್ದÁರೆ. ಶಂಕರ್‍ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಸಹ ಶಂಕರ್‍ಗುರು ಅವರೇ ಬರೆದಿz್ದÁರೆ. ‘ಬಡವ ರಾಸ್ಕಲï’ ಇವರ ನಿರ್ದೇಶನದ ಚೊಚ್ಚಲ ಚಿತ್ರ.

ಡಾಲಿ ಧನಂಜಯ ಹಾಗೂ ಶಂಕರ್ ಗುರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಾಸುಕಿ ವೈಭವ್ ಸಂಗೀತ ನೀಡಿz್ದÁರೆ. ಪ್ರೀತಿ ಜಯರಾಮನ್ ಅವರ ಛಾಯಾಗ್ರಹಣ, ನಿರಂಜನ್ ದೇವರಮನೆ ಅವರ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಡಾಲಿ ಧನಂಜಯ ಜೊತೆ ನಾಯಕಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸುತ್ತಿz್ದÁರೆ. ರಂಗಾಯಣ ರಘು, ತಾರಾ, ಸ್ಪರ್ಶರೇಖ, ಪೂರ್ಣಚಂದ್ರ ಮುಂತಾದವರು ಈ ಚಿತ್ರದ ಇತರೆ ತಾರಾಬಳಗದಲ್ಲಿz್ದÁರೆ.