ಆರ್ಯನ್ ಖಾನ್‍ಗೆ ಜಾಮೀನು
News

ಆರ್ಯನ್ ಖಾನ್‍ಗೆ ಜಾಮೀನು

October 29, 2021

ಮುಂಬೈ, ಅ.28-ಐಷಾರಾಮಿ ಡ್ರಗ್ಸ್ ಕೇಸ್‍ಗೆ ಸಂಬಂಧಿಸಿ ದಂತೆ ಎನ್‍ಸಿಬಿಯಿಂದ ಬಂಧನಕ್ಕೊಳ ಗಾಗಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಬಾಂಬೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆದರೆ ಜಾಮೀನು ಸಿಕ್ಕರೂ ಆರ್ಯನ್ ಖಾನ್ ಇನ್ನೂ ಜೈಲಿನಲ್ಲೇ ಇರಬೇಕಾಗಿದೆ. ಇಂದು ಜಾಮೀನು ಆದೇಶದ ಪ್ರತಿ ಸಿಗದ ಕಾರಣ ಅವರು ಜೈಲಿನಲ್ಲೇ ಉಳಿಯ ಬೇಕಾಗಿದೆ. ನಾಳೆ (ಶುಕ್ರವಾರ) ಆದೇಶದ ಪ್ರತಿ ಸಿಕ್ಕಿ ಬಿಡುಗಡೆಯ ಪ್ರಕ್ರಿಯೆ ಮುಗಿದರೆ ನಾಳೆ ಸಂಜೆ ಅಥವಾ ಶನಿವಾರ ಆರ್ಯನ್ ಬಿಡುಗಡೆಯಾಗಲಿದ್ದಾರೆ ಎಂದು ಅವರ ಪರ ವಕೀಲ ಮುಕುಲ್ ರೊಹ್ಟಗಿ ತಿಳಿಸಿದ್ದಾರೆ.

ಮುಂಬೈನ ಸೆಷನ್ಸ್ ಕೋರ್ಟ್ ಆರ್ಯನ್ ಖಾನ್‍ಗೆ ಜಾಮೀನು ನಿರಾಕರಿಸಿತ್ತು. ಆರ್ಯನ್ ಖಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‍ನಲ್ಲಿ ಹಿರಿಯ ವಕೀಲ ಮುಕುಲ್ ರೊಹ್ಟಗಿ ಆರ್ಯನ್ ಪರ ವಾದ ಮಂಡಿಸಿದ್ದರು. ಅರ್ಜಿ ವಿಚಾರಣೆ ವೇಳೆ ಮುಕುಲ್ ರೊಹ್ಟಗಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ಜಾಮೀನು ನೀಡಿದೆ. ಇದರೊಂದಿಗೆ ಆರ್ಯನ್ ಖಾನ್ ಹಲವು ದಿನಗಳ ಜೈಲು ವಾಸದ ಬಳಿಕ ಬಿಡುಗಡೆ ಗೊಳ್ಳುತ್ತಿದ್ದಾರೆ. ಆರ್ಯನ್ ಖಾನ್ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುಮ್ ಧಮೇಚಾಗೂ ಜಾಮೀನು ಮಂಜೂರಾಗಿದೆ. ಆರ್ಯನ್‍ಖಾನ್ ಪ್ರತಿ ಶುಕ್ರವಾರ ಎನ್‍ಸಿಬಿ ವಿಚಾರಣೆಗೆ ಹಾಜರಾಗಬೇಕು, ಪಾಸ್‍ಪೋರ್ಟ್ ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು, ಯಾವುದೇ ಕಾರಣಕ್ಕೂ ಆರ್ಯನ್ ವಿದೇಶ ಪ್ರವಾಸ ಮಾಡಬಾರದು, ಪ್ರಕರಣದ ಉಳಿದ ಆರೋಪಿಗಳ ಜೊತೆ ಸಂಪರ್ಕ ಬೆಳೆಸ ಬಾರದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಹಿ ರಂಗ ಹೇಳಿಕೆ ನೀಡಬಾರದು, ಸಾಕ್ಷ್ಯಗಳ ನಾಶಕ್ಕೆ ಪ್ರಯತ್ನಿಸ ಬಾರದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತು ಸೇರಿದಂತೆ 13 ಷರತ್ತುಗಳನ್ನು ವಿಧಿಸಿ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು ಮಾಡಲಾಗಿದೆ.

Translate »