ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ  ಪೂರ್ಣಗೊಳ್ಳಲು ಇನ್ನೂ 6 ತಿಂಗಳು ಬೇಕು
News

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪೂರ್ಣಗೊಳ್ಳಲು ಇನ್ನೂ 6 ತಿಂಗಳು ಬೇಕು

August 10, 2022

ಬೆಂಗಳೂರು, ಆ.9(ಕೆಎಂಶಿ)-ಬೆಂಗಳೂರು-ಮೈಸೂರು ನಡುವಿನ ವಿಶ್ವದರ್ಜೆ ಗುಣಮಟ್ಟದ ರಾಷ್ಟ್ರೀಯ ಹೆದ್ದಾ ರಿಯ ಕಾಮಗಾರಿ ದಸರಾ ವೇಳೆಗೆ ಪೂರ್ಣಗೊಳ್ಳದು. ಡಿಸೆಂಬರ್ ಇಲ್ಲವೇ ಜನವರಿ 2023ಕ್ಕೆ ಈ ರಸ್ತೆ ಪೂರ್ಣ ಗೊಂಡು, ರಾಷ್ಟ್ರಕ್ಕೆ ಸಮರ್ಪಣೆಯಾಗಲಿದೆ.

ಮೊದಲು ಬೆಂಗಳೂರು-ಮದ್ದೂರಿನ ನಿಡಘಟ್ಟ 54 ಕಿಲೋ ಮೀಟರ್ ಉದ್ದದ ರಸ್ತೆ ಅಕ್ಟೋಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ವಿಶ್ವವಿಖ್ಯಾತ ಮೈಸೂರು ದಸರಾ ವೇಳೆಗೆ ಈ ರಸ್ತೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವುದಾಗಿ ಹೇಳಿಕೆ ನೀಡಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ಬೀಳು ತ್ತಿರುವ ಮಳೆ ಮತ್ತು ಗುತ್ತಿಗೆದಾರರ ವಿಳಂಬದಿಂದ ಈ ರಸ್ತೆ ಕಾಮಗಾರಿ ಕೇಂದ್ರ ಸಚಿವರ ಆಶಯದಂತೆ ಪೂರ್ಣಗೊಳ್ಳುತ್ತಿಲ್ಲ. ಆದರೆ ಆಗಸ್ಟ್ 15ರಂದು ಬೆಂಗ ಳೂರು ಹೊರ ವಲಯದ ಕ್ರೈಸ್ಟ್ ಕಾಲೇಜ್‍ನಿಂದ ನಿಡಘಟ್ಟದವರೆಗೆ ಒಂದು ಭಾಗದಲ್ಲಿ ಸಂಚಾರ ಆರಂಭಿ ಸುವ ಕಾಮಗಾರಿ ಪೂರ್ಣಗೊಳ್ಳಲಿದೆ. ಅಂದು ಗುತ್ತಿಗೆ ದಾರರು ಮತ್ತು ಸಂಸ್ಥೆಗಳು ದೊಡ್ಡ ಪ್ರಮಾಣದಲ್ಲಿ ರಾಷ್ಟ್ರಧ್ವಜ ಹಿಡಿದು, ರಸ್ತೆಯಲ್ಲಿ ಸಂಚರಿಸುವ ಮೂಲಕ ಸಾರ್ವ ಜನಿಕ ಓಡಾಟಕ್ಕೆ ಅವಕಾಶ ಮಾಡಿಕೊಡಲಿದ್ದಾರೆ.

ಬೆಂಗಳೂರು ನಿಡಘಟ್ಟದ ರಾಷ್ಟ್ರೀಯ ಹೆದ್ದಾರಿಯ ಆಸುಪಾಸಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸರ್ವೀಸ್ ರಸ್ತೆಗಳು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿವೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇ ಶಕ ಶ್ರೀಧರ್, ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಸರ್ಕಾ ರಕ್ಕೆ ವರದಿ ನೀಡಿದ್ದಾರೆ. ದಸರಾ ವೇಳೆಗೆ ರಸ್ತೆ ಕಾಮಗಾರಿ ಯನ್ನು ಪೂರ್ಣಗೊಳಿಸಲಾಗದು. ಇನ್ನು ನಾಲ್ಕು ಐದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತ ಮಾಡಿಕೊಡಲಾಗುವುದು. ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ರಸ್ತೆಯ ಕಾಮಗಾರಿ ತ್ವರಿತವಾಗಿ ಮುಗಿಸುವಂತೆ ಒತ್ತಡ ತಂದಿದ್ದೇವೆ. ಮಳೆ ನೀರು ಸರಾಗವಾಗಿ ಹೋಗಲು ಮತ್ತೆ ಕೆಲವೆಡೆ ಭೂ ಸ್ವಾಧೀನ ಮಾಡಬೇಕಾಗಿದೆ. ಭೂಸ್ವಾಧೀನದ ನಂತರ ರಾಷ್ಟ್ರೀಯ ಹೆದ್ದಾರಿ ಮತ್ತು ಸರ್ವೀಸ್ ರಸ್ತೆ ಹಾಗೂ ಸುರಂಗ ಮಾರ್ಗಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಹೆದ್ದಾರಿ ಸುರಕ್ಷತೆಯ ಬಗ್ಗೆ ಈ ವಾರದಲ್ಲಿ ದೆಹಲಿಯಿಂದ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಲಿದ್ದಾರೆ. ಆನಂತರ ಮೊದಲ ಹಂತದ ಒಂದು ಭಾಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಬಹುತೇಕ ಬೈಪಾಸ್ ರಸ್ತೆಗಳ ಕಾಮಗಾರಿ ಪೂರ್ಣಗೊಂಡಿದೆ. ಮೇಲ್ಸೇತುವೆ ಕಾಮಗಾರಿ ಭರದಿಂದ ನಡೆಯುತ್ತಿವೆ. ದಶಪಥದ ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಈ ನಗರಗಳ ನಡುವೆ 90 ನಿಮಿಷಗಳಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡಬಹುದಾಗಿದೆ ಎಂದಿದ್ದಾರೆ.

Translate »