ಬಂಜಾರ ಸಮುದಾಯ ಕಾಂಗ್ರೆಸ್ ಬೆಂಬಲಿಸಲು ಮನವಿ
ಮೈಸೂರು

ಬಂಜಾರ ಸಮುದಾಯ ಕಾಂಗ್ರೆಸ್ ಬೆಂಬಲಿಸಲು ಮನವಿ

April 27, 2018

ಮೈಸೂರು: ಬಂಜಾರ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಬಂಜಾರ ಸಂತ ಸೇವಾಲಾಲ್ ಬಳಗದ ಅಧ್ಯಕ್ಷ ಬಸವರಾಜ ನಾಯ್ಕ್ ಬಂಜಾರ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡಾಭಿವೃದ್ಧಿ ನಿಗಮ ಮಂಡಳಿ ರಚಿಸಿ ವರ್ಷಕ್ಕೆ 200 ಕೋಟಿ ರೂ.ಮೀಸಲಿಟ್ಟು, ಸಮುದಾಯದ ಏಳಿಗೆಗಾಗಿ ಸಮುದಾಯ ಭವನ, ಕಾಂಕ್ರೀಟ್ ರಸ್ತೆ, ಚರಂಡಿ, ಬಂಜಾರರ ಮೂಲ ಕಸುಬಾದ ಕಸೂತಿ, ಗುಡಿ ಕೈಗಾರಿಕೆ, ಶುದ್ಧ ಕುಡಿಯುವ ನೀರಿನ ಘಟಕ ಹೀಗೆ ಹಲವಾರು ಯೋಜನೆಗಳನ್ನು ನೀಡಿದರು.

ಮೈಸೂರು ವಿಭಾಗಕ್ಕೆ ಸೇರಿದ ಜಿಲ್ಲೆಗಳಿಗೆ ಮೈಸೂರು ನಗರದ ಶ್ರೀರಾಂಪುರ ಬಳಿ 5.50 ಕೋಟಿ ರೂ. ವೆಚ್ಚದಲ್ಲಿ ಬಂಜಾರ ಭವನ ಕಟ್ಟಿಸಿದರು. ಮಹಿಳಾ ಹಾಗೂ ಪುರುಷರ ಹಾಸ್ಟೆಲ್‍ಗಳಿಗೆ ತಲಾ 50 ಲಕ್ಷ ರೂ. ನೀಡಿ ಸಮಾಜದ ವಿಶ್ವಾಸ ಗಳಿಸಿದ್ದಾರೆ. ಬಂಜಾರ ಸಮುದಾಯದ ಅಭಿವೃದ್ಧಿಗೆ ಕಾಳಜಿ ತೋರಿರುವ ಸಿದ್ದರಾಮಯ್ಯ ಸರ್ಕಾರವನ್ನು ಬೆಂಬಲಿಸಬೇಕಿದೆ. ಹೀಗಾಗಿ ಬಂಜಾರ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಬೋಗಾದಿ ಗ್ರಾಪಂ ಉಪಾಧ್ಯಕ್ಷ ಸವಿತಾನಾಯ್ಕ್, ಹೆಚ್.ಡಿ.ಕೋಟೆ ತಾಲೂಕು ಬಂಜಾರ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ನಾಯ್ಕ್, ಮುಖಂಡರಾದ ರಮೇಶ್ ನಾಯ್ಕ್ ಇನ್ನಿತರರು ಉಪಸ್ಥಿತರಿದ್ದರು.

ಉಪ್ಪಾರರು ಕಾಂಗ್ರೆಸ್ ಬೆಂಬಲಿಸಲು ಮನವಿ

ಮೈಸೂರು: ಉಪ್ಪಾರ ಸಮುದಾಯಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿ, ಸಮಾಜದ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‍ನ್ನು ಬೆಂಬಲಿಸುವಂತೆ ಉಪ್ಪಾರ ಜನಾಂಗದ ಮುಖಂಡ ಹೆಚ್.ಎಸ್.ಮೂಗಶೆಟ್ಟಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರವು ಉಪ್ಪಾರರ ಪ್ರತ್ಯೇಕ ನಿಗಮ ಮಂಡಳಿ ರಚನೆ, ಭಗೀರಥ ಜಯಂತಿ ಆಚರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಲ್ಲದೆ, ಚಾಮರಾಜನಗರ ಕ್ಷೇತ್ರದಲ್ಲಿ ಸತತ ಮೂರು ಬಾರಿ ಸ್ಪರ್ಧಿಸಲು ಸಮುದಾಯದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಟಿಕೆಟ್ ನೀಡುವ ಮೂಲಕ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಬಿಜೆಪಿ ಉಪ್ಪಾರ ಸಮುದಾಯದವರಿಗೆ ಟಿಕೆಟ್ ನೀಡದೆ ಸಂಪೂರ್ಣವಾಗಿ ಕಡೆಗಣ ಸಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಸಮಾಜದ ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನೇ ಬೆಂಬಲಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲತಾ ಸಿದ್ದಶೆಟ್ಟಿ, ಆರ್.ಮಹದೇವ್, ಯೋಗೇಶ್, ಗೋವಿಂದರಾಜು, ಇನ್ನಿತರರು ಉಪಸ್ಥಿತರಿದ್ದರು.

Translate »