ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಬದ್ಧ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್ ಸ್ಪಷ್ಟನೆ
ಮೈಸೂರು

ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಬದ್ಧ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್ ಸ್ಪಷ್ಟನೆ

September 19, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್‍ನ ಹುಣ ಸೂರು ಶಾಖೆ ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಎಸ್.ಚಂದ್ರಶೇಖರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ರುವ ಅವರು ರಾಮಪ್ಪ ಪೂಜಾರ್ ಅವರು ಶಾಖೆಯ ವ್ಯವಸ್ಥಾಪಕರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ತನ್ನ ವ್ಯಾಪ್ತಿಯಲ್ಲಿರುವ ಸಹಕಾರ ಸಂಘಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂಬುದು ಮೇಲ್ನೋಟಕ್ಕೆ ವರದಿ ಯಾಗಿದ್ದು, ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾದರೆ ಆಡಳಿತ ಮಂಡಳಿಯ ಒಪ್ಪಿಗೆ ಪಡೆದು ಕ್ರಮ ಜರುಗಿಸಬೇಕಾಗಿದೆ ಎಂದಿದ್ದಾರೆ.

ಆದರೆ, ಬ್ಯಾಂಕ್‍ನ ಆಡಳಿತ ಮಂಡಳಿ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಭೆ ಕರೆಯಲು ಜಿಲ್ಲಾ ಚುನಾವಣಾಧಿ ಕಾರಿಗಳಾದ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದಿರುವ ಅವರು, ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದರ ಜೊತೆಗೆ ಕಾನೂನು ರೀತ್ಯ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಬ್ಯಾಂಕ್‍ನ ಹುಣಸೂರು ಶಾಖೆಯಲ್ಲಿ 28 ಕೋಟಿ ರೂ. ದುರುಪಯೋಗವಾಗಿದೆ ಎಂಬುದು ಮೇಲ್ನೋಟಕ್ಕೆ ಸರಿಯಾಗಿರುವುದಿಲ್ಲ ಎಂದು ತಿಳಿಸಿರುವ ಅವರು, ಹುಣಸೂರು ತಾಲೂಕು ಹನಗೋಡು, ಉಮ್ಮತ್ತೂರು ಮತ್ತು ಬನ್ನಿಕುಪ್ಪೆ ಸಹಕಾರ ಸಂಘಗಳಿಗೆ ಬಿಡುಗಡೆಯಾಗಿರುವ ಸಾಲಗಳ ಬಟವಾಡೆ ತಖ್ತೆಗಳನ್ನು ಈ ಸಹಕಾರ ಸಂಘದವರು ಸಲ್ಲಿಸಿರುವುದಿಲ್ಲ. ಆದ್ದರಿಂದ ಈ ಸಂಘಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಸೂಚಿಸಲಾಗಿದೆ. ಅಲ್ಲದೆ ಈ ಸಂಘಗಳಲ್ಲಿ ನಡೆದ ಹಣ ದುರುಪಯೋಗದ ಬಗ್ಗೆ ಸೂಕ್ತ ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಲು ಕ್ರಮ ವಹಿಸಲಾಗುವುದು ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ಅದು ಮಾತ್ರವಲ್ಲದೆ, ಹುಣಸೂರು ಮತ್ತು ಬಿಳಿಕೆರೆ ಶಾಖೆಯ ತಪ್ಪಿತಸ್ಥ ಸಿಬ್ಬಂದಿ ವರ್ಗದವರನ್ನು ವರ್ಗಾವಣೆ ಮಾಡಲಾಗಿದೆ. ಈ ಎಲ್ಲಾ ಸಿಬ್ಬಂದಿ ವಿರುದ್ಧ ಮೇಲ್ನೋಟಕ್ಕೆ ಆರೋಪಗಳು ಕಂಡು ಬಂದಿದ್ದು, ಶಾಸನ ಬದ್ಧ ವಿಚಾರಣೆ ನಂತರ ಅವರ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲು ಆಡಳಿತ ಮಂಡಳಿ ಬದ್ಧವಾಗಿದೆ. ಈ ಅವ್ಯವಹಾರದಲ್ಲಿ ಭಾಗಿಯಾದವರನ್ನು ರಕ್ಷಿಸಲು ಆಡಳಿತ ಮಂಡಳಿ ಯವರು ಪ್ರಯತ್ನಿಸುತ್ತಿದ್ದಾರೆ ಎಂಬ ವರದಿ ಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಈ ವಿಚಾರದಲ್ಲಿ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಿ. ಲಿಂಗಣ್ಣಯ್ಯ ಅವರು ಮತ್ತೊಂದು ವಿಚಾರವನ್ನೂ ನನ್ನ ಗಮನಕ್ಕಾಗಲಿ, ಇಲ್ಲವೆ ಆಡಳಿತ ಮಂಡಳಿ ಗಮನಕ್ಕೆ ತಾರದೇ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಬ್ಯಾಂಕ್‍ನ ಉಪನಿಯಮಗಳ ಉಲ್ಲಂಘನೆಯಾಗಿದೆ. ಇದಕ್ಕಾಗಿ ಅವರನ್ನು ಸೆ.4ರಂದು ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ ಯಿಂದ ಬಿಡುಗಡೆ ಮಾಡಲಾಗಿತ್ತು. ಅದಕ್ಕೆ ಸೆ.7ರಂದು ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರು ತಡೆಯಾಜ್ಞೆ ನೀಡಿದ್ದರು. ಹಾಗಾಗಿ ಲಿಂಗಣ್ಣಯ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮುಂದು ವರೆದಿದ್ದು, ಆದರೆ ಸೆ. 15ರಂದು ರಾಜ್ಯ ಹೈಕೋರ್ಟ್ ಸಹಕಾರ ಸಂಘಗಳ ಜಂಟಿ ನಿಬಂಧಕರ ಆದೇಶಕ್ಕೆ ತಡೆ ಯಾಜ್ಞೆ ನೀಡಿದೆ ಎಂದು ಚಂದ್ರಶೇಖರ್ ವಿವರ ನೀಡಿದ್ದಾರೆ.

Translate »