ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಬಸವ ಜಯಂತಿ ಆಚರಣೆ
ಕೊಡಗು

ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಬಸವ ಜಯಂತಿ ಆಚರಣೆ

ಸೋಮವಾರಪೇಟೆ: ಶ್ರೀ ಬಸವೇಶ್ವರ ಯುವಕ ಸಂಘ, ವೀರಶೈವ ಸಮಾಜ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಅರ್ಥಪೂರ್ಣವಾಗಿ ಬಸವ ಜಯಂತಿಯನ್ನು ಇಂದಿಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, 12ನೇ ಶತಮಾನದಲ್ಲಿ ಅನುಭವ ಮಂಟಪ ರಚಿಸಿ ಪ್ರಜಾಪ್ರಭತ್ವಕ್ಕೆ ನಾಂದಿ ಹಾಡಿದ್ದಾರೆ. ಬಸವೇಶ್ವರರ ಜನ್ಮ ದಿನಾಚರಣೆಯನ್ನು ಒಂದು ವರ್ಗ ಸೀಮಿತಗೊಳಿಸದೇ ಇಡೀ ದೇಶದಲ್ಲಿ ಎಲ್ಲರೂ ಒಟ್ಟಾಗಿ ಆಚರಿಸುವಂ ತಾಗಬೇಕು. ಅವರ ಆದರ್ಶಗಳನ್ನು ಎಲ್ಲರೂ ಮೈ ಗೂಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇ ಕೆಂದರು. ಕಾರ್ಯಕ್ರಮ ಪ್ರಯುಕ್ತ ಬೆಳಿಗ್ಗೆ ವಿರಕ್ತಮಠದಿಂದ ಪಟ್ಟಣದ ಪ್ರಮುಖ ಬೀದಿಯಲ್ಲಿ ವೀರಶೈವ ಸಮಾಜದಿಂದ ಪ್ರಭಾತ್‍ಭೇರಿ ಮೆರವಣಿಗೆ ನಡೆಯಿತು. ನಂತರ ಕಕ್ಕೆಹೊಳೆ ಸಮೀಪವಿರುವ ಬಸವೇ ಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ವಿರಕ್ತ ಮಠದ ಶ್ರೀವಿಶ್ವೇಶ್ವರ ಸ್ವಾಮೀಜಿ, ಕಿರಿಕೊಡ್ಲಿಮಠದ ಶ್ರೀಸದಾಶಿವ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಅಭಿನವ ಶ್ರೀಸಿದ್ದ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್.ಮಹೇಶ್, ಅರ್ಚಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್‍ಮೂರ್ತಿ, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಎಸ್.ಎಸ್. ಮಲ್ಲಿಕಾರ್ಜುನ್, ವೀರಶೈವ ಸಮಾಜದ ಯಜಮಾನ ಕೆ.ಎನ್. ಶಿವಕುಮಾರ್, ಶೆಟ್ರು ಕೆ.ಎನ್. ತೇಜಸ್ವಿ, ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಪಂ ಉಪಾ ಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ತಹಸೀಲ್ದಾರ್ ಗೋವಿಂದರಾಜು ಬಸವಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.ಇದೇ ಸಂದರ್ಭ ಜೂನಿಯರ್ ಹಾಕಿ ಇಂಡಿಯಾ ತರಬೇತಿ ಶಿಬಿರಕ್ಕೆ ಆಯ್ಕೆ ಯಾಗಿರುವ ಇಲ್ಲಿನ ಸೂರ್ಯ ಅವರನ್ನು ಸನ್ಮಾನಿಸಲಾಯಿತು. ನಂತರ ಬಸವೇಶ್ವರ ದೇವಾಲಯದಲ್ಲಿ ದಾಸೋಹ ನಡೆಯಿತು.

ವಿರಾಜಪೇಟೆ ವರದಿ: ಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿ ಸಮಾಜದ ಸುಧಾರಣೆ ಹಾಗೂ ವಚನಕಾರ ರಲ್ಲಿ ಮೊದಲಿಗರಾಗಿ ಸಮಾಜದ ಎಡರು- ತೊಡರು ಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶಿಲ್ದಾರ್ ಬಿ.ಎಂ.ಗೋವಿಂದರಾಜು ಹೇಳಿದರು.

ವಿರಾಜಪೇಟೆ ಮಿನಿವಿಧಾನಸೌಧ ತಾಲೂಕು ಕಛೇರಿ ಸಭಾಂಗಣದಲ್ಲಿ ‘ಬಸವ ಜಯಂತಿ’ ಅಂಗವಾಗಿ ಆಯೋಜಿಸಲಾಗಿದ್ದ ಸಭೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಸವಣ್ಣನವರು ಅಂದಿನ ದಿನದಲ್ಲಿ ಬಾಲ್ಯ ವಿವಾಹ ಹಾಗೂ ಮೇಲು ಕೀಳು-ಜಾತಿ ಎಂಬುದನ್ನು ಹೋಗಲಾಡಿಸಿದ ಮಹಾನು ಭಾವ. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವುಗಳು ನಡೆಯಬೇಕಾಗಿದೆ ಎಂದರು. ಈ ಸಂದರ್ಭ ತಾಲೂಕು ಕಛೇರಿಯ ಮಂಜುನಾಥ್, ಕಂದಾಯ ಪರಿವೀಕ್ಷಕ ಪಳಂಗಪ್ಪ ಹಾಗೂ ಕಚೇರಿಯ ಸಿಬ್ಬಂದಿಗಳು ಇತರರು ಹಾಜರಿದ್ದರು.

May 8, 2019

Leave a Reply

Your email address will not be published. Required fields are marked *