ಮೇ 7, 8ರಂದು ಮೈಸೂರಲ್ಲಿ ಅರ್ಥಪೂರ್ಣ ಬಸವ ಜಯಂತಿ ಆಚರಣೆ
ಮೈಸೂರು

ಮೇ 7, 8ರಂದು ಮೈಸೂರಲ್ಲಿ ಅರ್ಥಪೂರ್ಣ ಬಸವ ಜಯಂತಿ ಆಚರಣೆ

May 4, 2019

ಮೈಸೂರು: ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು, ಬಸವ ಬಳಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಮೇ 7 ಮತ್ತು 8ರಂದು ಬಸವ ಜಯಂತಿ ಆಯೋಜಿಸಲಾಗಿದೆ ಎಂದು ಬಸವ ಬಳಗಗಳ ಒಕ್ಕೂಟದ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಎಸ್.ಎಂ.ಜಂಬುಕೇಶ್ವರ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 21 ವರ್ಷಗಳಿಂದ ಮೈಸೂರಿನಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷ ಜಯಂ ತಿಗೆ ಜಿಲ್ಲಾಡಳಿತದ ಸಹಯೋಗ ಇರುತ್ತಿತ್ತು. ಆದರೆ ಈ ವರ್ಷ ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅದು ಸಾಧ್ಯವಾಗಿಲ್ಲ. ಆದರೆ ಬಸವೇಶ್ವರರ ಜಯಂತಿ ಮಹೋತ್ಸವ ಅರ್ಥಪೂರ್ಣವಾಗಿ ನಡೆಯಲಿದೆ ಎಂದರು.

ಕಲಾಮಂದಿರದಲ್ಲಿ ಎರಡು ದಿನಗಳ ಕಾಲ ಜಯಂತಿ ಮಹೋತ್ಸವ ನಡೆಯಲಿದ್ದು, ಮೇ 7ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಾ ಧೀಶ ಡಾ.ಎಂ.ಎನ್.ವೆಂಕಟಾಚಲಯ್ಯ ಜಯಂತಿ ಮಹೋ ತ್ಸವ ಉದ್ಘಾಟಿಸಲಿದ್ದಾರೆ. ಶಿವಗಂಗಾ ಕ್ಷೇತ್ರದ ಶ್ರೀ ಮೇಲಣ ಗವಿಮಠದ ಶ್ರೀ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಇದಕ್ಕೂ ಮುನ್ನ ಬಸವೇಶ್ವರ ವೃತ್ತದಲ್ಲಿ ಬೆಳಿಗ್ಗೆ 8.30ಕ್ಕೆ ಸರಗೂರು ಶ್ರೀ ಪಡುವಲ ಮಠದ ಶ್ರೀ ಮಹಾದೇವ ಸ್ವಾಮೀಜಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಇಲ್ಲಿಂದ ಕಲಾ ಮಂದಿರದವರೆಗೆ ಶ್ರೀ ಬಸವೇಶ್ವರರ ಪುತ್ಥಳಿಯನ್ನು ವಿವಿಧ ಕಲಾತಂಡ ಹಾಗೂ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಇದಕ್ಕೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ ನೀಡಲಿದ್ದಾರೆ. ಮೈಸೂರಿನ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಹಾಗೂ ಆಲ ಮಟ್ಟಿಯ ಶ್ರೀ ಅನ್ನದಾನೇಶ್ವರ ಪುರವರ ಹಿರೇಮಠದ ಡಾ.ಶ್ರೀ ರುದ್ರಮುನಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಜಿಪಂ ಸಿಇಓ ಕೆ.ಜ್ಯೋತಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಮಧ್ಯಾಹ್ನ 2.30ಕ್ಕೆ `ಶರಣ ಧರ್ಮ-ಸಮನ್ವಯತೆ’ ಕುರಿತು ವಿಚಾರ ಗೋಷ್ಠಿ, ಸಂಜೆ 5ಕ್ಕೆ `ಶರಣರ ಜೀವನ ಮೌಲ್ಯಗಳು’ ಕುರಿತು ಉಪನ್ಯಾಸ ಹಾಗೂ ಸಂಜೆ 6.15ಕ್ಕೆ ಸಾಂಸ್ಕøತಿಕ ಕಾರ್ಯಕ್ರಮವಿದೆ. ಮೇ 8ರಂದು ಬೆಳಿಗ್ಗೆ 9.30ಕ್ಕೆ ವಚನ ಗಾಯನ, ಬೆಳಿಗ್ಗೆ 10.30ಕ್ಕೆ ವಿಜಯಪುರ ಜ್ಞಾನಯೋಗಾ ಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಂದ ವಿಶೇಷ ಪ್ರವಚನ ನಡೆಯಲಿದೆ. ಬೆಳಿಗ್ಗೆ 11.45ಕ್ಕೆ `ವರ್ತಮಾನಕ್ಕೆ ಶರಣರ ಚಿಂತನೆಗಳು’ ಕುರಿತು ಸಂವಾದ ನಡೆಯಲಿದೆ ಎಂದರು.

ಸಮಾರೋಪ: ಮೇ 8ರಂದು ಮಧ್ಯಾಹ್ನ 2.30ಕ್ಕೆ ಸಮಾ ರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಲೋಕಾಯುಕ್ತ ಪಿ.ವಿಶ್ವನಾಥಶೆಟ್ಟಿ ಸಮಾರೋಪ ಭಾಷಣ ಮಾಡಲಿದ್ದಾರೆ. ಹಾರನಹಳ್ಳಿ ಕೋಡಿಮಠದ ಶ್ರೀ ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಹೈದರಾಬಾದಿನ ಜಗದ್ಗುರು ಆಶ್ರಮದ ಪ್ರವ ಚನಕಾರ ಪಂಡಿತ್ ಮೌಲಾನಾ ಸಯ್ಯದ್ ಬಾಷ ಹಾಗೂ ಲಂಡನ್‍ನ ಶ್ರೀ ಬಸವೇಶ್ವರ ಫೌಂಡೇಷನ್‍ನ ಅಧ್ಯಕ್ಷ ಡಾ. ನೀರಜ್ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧನೆ ಗುರು ತಿಸಿ ಆರ್ಥಿಕ ತಜ್ಞ ಪ್ರೊ.ಸಿ.ಕೆ.ರೇಣುಕಾರ್ಯ, ಜೆಎಸ್‍ಎಸ್ ಎಹೆಚ್‍ಇ ಮತ್ತು ಆರ್ ಕುಲಪತಿ ಡಾ.ಬಿ.ಸುರೇಶ್, ಜಾನಪದ ತಜ್ಞ ಟಿ.ಎಸ್.ರಾಜಪ್ಪ, ಡ್ರಾಮಾ ಜೂನಿಯರ್ಸ್ ಪ್ರಶಸ್ತಿ ವಿಜೇತ ಎಂ.ಬಿ.ಅಮಿತ್, ಮಹಿಳಾ ಪೈಲೆಟ್ ರೂಪ, ಯೋಗಪಟು ಅಪೂರ್ವ ಅವರನ್ನು ಸನ್ಮಾನಿಸಲಾಗುವುದು. ಬಳಿಕ ಸಂಜೆ 4.30ಕ್ಕೆ ಒಕ್ಕೂಟದ ಮಹಿಳೆಯರು ಮತ್ತು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮವಿದೆ ಎಂದರು. ಒಕ್ಕೂಟದ ಅಧ್ಯಕ್ಷೆ ಜಯಾಗೌಡ, ಅಖಿಲ ಭಾರತ ವೀರಶೈವ ಮಹಾಸಭಾ ಮೈಸೂರು ಘಟಕದ ಅಧ್ಯಕ್ಷ ಎಸ್.ಶಿವಮೂರ್ತಿ ಕಾನ್ಯ, ಮುಖಂಡರಾದ ರಘು, ಡಿ.ಕೆ.ನಾಗರಾಜು, ಮೂಗೂರು ನಂಜುಂಡಸ್ವಾಮಿ, ಕೆಂಪಣ್ಣ ಸುದ್ದಿಗೋಷ್ಠಿಯಲ್ಲಿದ್ದರು.

Translate »