ಕೊರೊನಾ ವಾರಿಯರ್ಸ್‍ಗೆ `ಬಸವ ರತ್ನ’ ಪ್ರಶಸ್ತಿ ಪ್ರದಾನ
ಮೈಸೂರು

ಕೊರೊನಾ ವಾರಿಯರ್ಸ್‍ಗೆ `ಬಸವ ರತ್ನ’ ಪ್ರಶಸ್ತಿ ಪ್ರದಾನ

June 1, 2020

ಮೈಸೂರು, ಮೇ 31(ಎಂಟಿವೈ)- ಮೈಸೂರು ಶರಣ ಮಂಡಳಿ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಕೊರೊನಾ ವಾರಿಯರ್ಸ್‍ಗೆ `ಬಸವ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಶರಣ ಮಂಡಳಿ ನೀಡುವ `ಬಸವ ರತ್ನ’ ಪ್ರಶಸ್ತಿಯನ್ನು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹಾಗೂ ಮೆಡಿವೇವ್ ಆಸ್ಪತ್ರೆಯ ಡಾ.ಸಿ.ಶರತ್‍ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಡಾ.ಶರತ್‍ಕುಮಾರ್ ಪರವಾಗಿ ಅವರ ಪುತ್ರ ಡಾ.ಎಸ್.ರವಿಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ ಮಾತನಾಡಿ, ಕೊರೊನಾ ವೇಳೆ ಜನರ ಸೇವೆ ಮಾಡಿ ದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಈ ಸಂದರ್ಭ ಶಾಸಕ ಎಲ್.ನಾಗೇಂದ್ರ, ಮೈಸೂರು ಶರಣ ಮಂಡಳಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ವಿ. ರಾಜೀವ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಮುಖಂಡರಾದ ಯು.ಎಸ್. ಶೇಖರ್, ಡಾ.ಡಿ.ತಿಮ್ಮಯ್ಯ ಮತ್ತಿತರರಿದ್ದರು.

Translate »