ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ
ಮೈಸೂರು

ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ

December 13, 2018

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾದ ನಂತರ ಪರಿಷತ್ ಹಂಗಾಮಿ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ತಾವೇ ಸಭಾಪತಿಯಾಗುತ್ತೇವೆ ಎಂಬ ನಂಬಿಕೆಯಲ್ಲಿದ್ದರು. ಆದರೆ, ಆ ಸ್ಥಾನ ಸಿಗದಿದ್ದರಿಂದ ತೀವ್ರ ನಿರಾಸೆಗೊಂಡ ಹೊರಟ್ಟಿ, ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿಯಾಗಿರಬಾರದು ಎಂದು ಸಿಎಂ ಎಚ್‍ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು `ಎಚ್‍ಡಿಕೆ ಅವರು ಮುಖ್ಯಮಂತ್ರಿಯಾಗಿರುವುದು ಮೈತ್ರಿ ಧರ್ಮ ಪಾಲಿಸುವುದಕ್ಕೆ. ಮೈತ್ರಿ ಪಕ್ಷ ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿಲ್ಲ.

ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ವರ್ತನೆ ಪ್ರಶ್ನಿಸುವಂತೆ ವರಿಷ್ಠರಿಗೆ ಕೇಳಿ ಕೊಳ್ಳುತ್ತೇನೆ’ ಎಂದಿದ್ದಾರೆ. ಪ್ರಮುಖ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್ ಹೇಳಿದಂತೆ ನಡೆದರೆ, ಇದೇ ತರ ಮುಂದುವರಿದರೆ ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಚ್‍ಡಿಕೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸ್ಥಾನ ಸಿಗದ ಹತಾಶೆಯಲ್ಲಿದ್ದ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಕೊಡಿಸುವುದಾಗಿ ಜೆಡಿಎಸ್ ವರಿಷ್ಠರು ಸಮಾ ಧಾನ ಮಾಡಿದ್ದರು. ಆದರೆ ಬುಧವಾರ ನಡೆದ ರಾಜಕೀಯ ಬೆಳವಣಿU Éಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‍ನ ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Translate »