ಸಾಹಿತಿ ಚಂಪಾಗೆ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ: ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರದಾನ ಮಾಡುವ ಈ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಖ್ಯಾತ ಸಾಹಿತಿ, ವಿಮರ್ಶಕರಾದ ಚಂದ್ರಶೇಖರ ಪಾಟೀಲ ಆಯ್ಕೆಯಾಗಿ ದ್ದಾರೆ. “ಸಾಹಿತ್ಯ ಕ್ಷೇತ್ರಕ್ಕೆ ಚಂದ್ರಶೇಖರ ಪಾಟೀಲರು ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ.

ಬರುವ ಮೇ 7ರಂದು ನಡೆಯಲಿರುವ ಬಸವ ಜಯಂತಿ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಳೆದ ಸಾಲಿನಲ್ಲಿ ಪ್ರಕೃತಿ ಪ್ರೇಮಿ ಮಳವಳ್ಳಿಯ ಕಾಮೇಗೌಡರಿಗೆ ಬಸವಶ್ರೀ ಪ್ರಶಸ್ತಿ ಒಲಿದು ಬಂದಿತ್ತು.