ರಾಜ್ಯ ಪ್ರವೇಶಿಸಿದ 4ನೇ ಅಲೆ ಎಚ್ಚರವಿರಲಿ… ಆತಂಕ ಬೇಡ
ಮೈಸೂರು

ರಾಜ್ಯ ಪ್ರವೇಶಿಸಿದ 4ನೇ ಅಲೆ ಎಚ್ಚರವಿರಲಿ… ಆತಂಕ ಬೇಡ

April 26, 2022

ಜನತೆಗೆ ಸರ್ಕಾರದ ಎಚ್ಚರಿಕೆ

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಹಾಗೆಯೇ ತಪ್ಪದೇ ೩ನೇ ಡೋಸ್ ಪಡೆದುಕೊಳ್ಳಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದರು.
ಬೆಂಗಳೂರು,ಏ.೨೫(ಕೆಎAಶಿ)-ಕೊರೊನಾ ೪ನೇ ಅಲೆ ರಾಜ್ಯ ಪ್ರವೇಶಿಸಿದ್ದು, ಸೋಂಕಿನ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿರುವ ರಾಜ್ಯ ಸರ್ಕಾರ, ಆದರೆ ಆತಂಕಪಡುವ ಅಗತ್ಯವಿಲ್ಲ ಎಂದಿದೆ.

ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದ್ದು, ಸಾರ್ವ ಜನಿಕರು ತಪ್ಪದೇ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಆದೇಶಿಸಿದೆ. ೩ನೇ ಡೋಸ್ ಲಸಿಕೆ ಪಡೆಯದವರು ತಕ್ಷಣವೇ ಲಸಿಕೆ ಪಡೆದು, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದೆ. ಸೋಂಕಿನ ತೀವ್ರತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇದೇ ೨೭ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ, ಸೋಂಕಿನ ಬಗ್ಗೆ ಮಾಹಿತಿ ಪಡೆದಿದ್ದಲ್ಲದೆ, ತಕ್ಷಣಕ್ಕೆ ಕೆಲ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.

ಮುಂದಿನ ನಾಲ್ಕೆöÊದು ವಾರಗಳಲ್ಲಿ ಅಲೆ ಪೂರ್ಣ ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಭೆ ಸೂಚನೆ ನೀಡಿದೆ. ಸಭೆಯಲ್ಲಿ ಭಾಗವಹಿಸಿದ ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಒಮಿಕ್ರಾನ್ ಉಪತಳಿಯಿಂದಲೇ ಸೋಂಕು ಹೆಚ್ಚಳವಾಗುತ್ತದೆ. ಆದರೆ ಇದರ ತೀವ್ರತೆ ಕಡಿಮೆಯಿದ್ದು, ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಆದರೆ ದೀರ್ಘಕಾಲಿಕ ಅನಾರೋಗ್ಯವುಳ್ಳವರು ಎಚ್ಚರ ವಹಿಸಬೇಕು. ಹೃದಯ ಸಮಸ್ಯೆಗೆ ಸಂಬAಧಿಸಿದAತೆ, ಶ್ವಾಸಕೋಶ, ಕ್ಯಾನ್ಸರ್, ಅಸ್ತಮಾದಂತಹ ದೀರ್ಘಕಾಲಿನ ಅನಾರೋಗ್ಯ ಸಮಸ್ಯೆಯುಳ್ಳವರು ಎಚ್ಚರ ವಹಿಸಬೇಕು. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಿದೆ. ಆದರೆ ಅಲ್ಲಿ ಎರಡು ಮತ್ತು ಮೂರನೇ ಲಸಿಕೆ ಜನರು ಪಡೆದುಕೊಂಡಿರುವುದರಿAದ ಯಾರೂ ಆಸ್ಪತ್ರೆಗೆ ದಾಖಲಾಗದೆ ಗುಣಮುಖ ರಾಗುತ್ತಿದ್ದಾರೆ. ಲಸಿಕೆ ಪಡೆಯದವರ ಮೇಲೆ ಇದರ ಪರಿಣಾಮ ಹೆಚ್ಚಿರುತ್ತದೆ. ಆದ್ದರಿಂದ ಲಸಿಕೆ ಪಡೆಯದವರು ಮೊದಲು ಲಸಿಕೆ ಪಡೆದು, ತಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳುವಂತೆ ಜನರಲ್ಲಿ ಮತ್ತಷ್ಟು ಮುಂಜಾಗ್ರತಾ ವಹಿಸಲು ಸರ್ಕಾರ ಕ್ರಮ ಕೈಗೊಳ್ಳಬೇ ಕೆಂದು ಸದಸ್ಯರು ಸಲಹೆ ಮಾಡಿದ್ದಾರೆ. ಯಾವ ರಾಷ್ಟçಗಳಲ್ಲಿ ಪೂರ್ಣವಾಗಿ ಲಸಿಕಾಕರಣ ವಾಗಿಲ್ಲವೋ ಅಂತಹ ಕಡೆ ರೋಗ ಉಲ್ಬಣಗೊಂಡಿದೆ ಮತ್ತು ಸಮಸ್ಯೆಯೂ ಹೆಚ್ಚಿದೆ. ನಮ್ಮ ರಾಷ್ಟçದಲ್ಲಿ ಲಸಿಕಾಕರಣವಾದ ನಂತರ ಮೂರನೇ ಅಲೆ ಬಂದರೂ ಅದು ಜನರ ಮೇಲೆ ತೀವ್ರವಾದ ಪರಿಣಾಮ ಬೀರಲಿಲ್ಲ. ನಾಲ್ಕನೇ ಅಲೆಯು ಇದರ ಉಪ ತಳಿಯೇ ಆಗಿರುವುದರಿಂದ ಜನ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ನಾಲ್ಕೆöÊದು ವಾರ ಬಾಧಿಸಲಿದೆ

ಬೆಂಗಳೂರು,ಏ.೨೫- ಮೂರನೇ ಅಲೆ ಆರು ವಾರಗಳ ಕಾಲ ರಾಜ್ಯವನ್ನು ಬಾಧಿಸಿತು, ೪ನೇ ಅಲೆಯೂ ನಾಲ್ಕೆöÊದು ವಾರಗಳ ಕಾಲ ಬಾಧಿಸಲಿದ್ದು, ಈ ಸಮಯದಲ್ಲಿ ಬಹಳ ಎಚ್ಚರ ವಹಿಸ ಬೇಕು. ತಜ್ಞರ ಸಲಹೆಯನ್ನು ಕಾರ್ಯ ರೂಪಕ್ಕೆ ತರುವಂತೆ ಆರೋಗ್ಯ ಇಲಾ ಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಸಭೆ ನಂತರ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿದರಲ್ಲದೆ, ಜನ ನಿಬಿಡ ಪ್ರದೇಶಗಳಲ್ಲಿ, ಒಳಾಂಗಣ ಪ್ರದೇಶಗಳಲ್ಲಿ ಜನ ಇನ್ನು ಮುಂದೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದರು. ಜನ ಕಡ್ಡಾಯವಾಗಿ
ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಮೂರನೇ ಹಂತದ ಲಸಿಕೆಗೆ ಸಜ್ಜಾಗಬೇಕು ಎಂದು ವಿವರಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯ ಗೊಳಿಸಿದರೂ ಸದ್ಯಕ್ಕೆ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡಲಾಗುವುದಿಲ್ಲ ಎಂದ ಅವರು, ಜನರಲ್ಲಿ ತಾನಾಗಿಯೇ ಇದರ ಬಗ್ಗೆ ಅರಿವು ಮೂಡಬೇಕು ಎಂದರು. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಶೇಕಡಾ ೧.೯ ರಷ್ಟು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಮೇಲೆ ಹೆಚ್ಚಿನ ನಿಗಾ ವಹಿಸಲು, ಅವರನ್ನು ಟೆಲಿ ಮಾನಿಟರಿಂಗ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಜಗತ್ತಿನ ವಿವಿಧ ದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದಕ್ಕೆ ಲಸಿಕೆ ಕೊಡುವ ವಿಷಯದಲ್ಲಿ ಆಗಿರುವ ವಿಳಂಬವೂ ಕಾರಣವಾಗಿರಬಹುದು ಎಂದು ಸುಧಾಕರ್ ಹೇಳಿದರು.
ದಕ್ಷಿಣ ಕೊರಿಯಾ, ಥೈಲ್ಯಾಂಡ್, ಜಪಾನ್‌ನಂತಹ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆ ದೇಶಗಳಿಂದ ಬೆಂಗಳೂರಿಗೆ ವಿಮಾನದಲ್ಲಿ ಬರುವವರ ಮೇಲೆ ನಿಗಾ ಇಡುವುದು, ಅವರ ಸಂಪರ್ಕಿತರ ಮೇಲೆ ನಿಗಾ ಇಡುವುದು ಸರ್ಕಾರದ ಸದ್ಯದ ನಿರ್ಧಾರ ಎಂದು ನುಡಿದರು. ದೆಹಲಿಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಿರುವುದರಿಂದ ಅಲ್ಲಿಂದ ನಾವು ವರದಿ ತರಿಸಿಕೊಂಡಿದ್ದೇವೆ. ಅದರ ಪ್ರಕಾರ ಮೂರನೇ ಅಲೆಯಂತೆ ಇದು ಕೂಡಾ ದುರ್ಬಲವಾಗಿದ್ದು, ಜನ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿಲ್ಲ.

ಇಷ್ಟಾದರೂ ಜನ ಎಚ್ಚರ ವಹಿಸಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಜನಜಂಗುಳಿಯ ಪ್ರದೇಶಗಳಲ್ಲಿ, ಒಳಾಂಗಣ ವೇದಿಕೆಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ಜನಸಂದಣ , ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ
ಬೆಂಗಳೂರು, ಏ. ೨೫- ಕೋವಿಡ್ ೪ನೇ ಅಲೆಯನ್ನು ತಡೆಯುವ ಮುನ್ನೆ ಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನ ಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಹೊಸ ಮಾರ್ಗಸೂಚಿಯಂತೆ ಜನ ಸಂದಣ ಹಾಗೂ ಒಳಾಂಗಣದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆಗೆ ನಿರ್ದೇಶನ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಧರಿಸದೇ ಇದ್ದರೆ ದಂಡ ಹಾಕಲಾಗುವು ದಿಲ್ಲ. ಆದರೆ ಜನರು ಇದನ್ನು ಗಂಭೀರ ವಾಗಿ ಪರಿಗಣ ಸಬೇಕು. ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇ.೧.೯ ರಷ್ಟು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಹೆಚ್ಚು ನಿಗಾ

ಇಡಲಾಗಿದೆ. ಅವಶ್ಯಕತೆ ಇದ್ದರೆ ಸೋಂಕಿತರಿಗೆ ವಿಶೇಷ ಮೇಲ್ವಿಚಾರಣೆ ಜೊತೆಗೆ ಚಿಕಿತ್ಸೆ ಕೂಡ ನೀಡಲಾಗುವುದು ಎಂದರು. ವಿಶ್ವ ಆರೊಗ್ಯ ಸಂಸ್ಥೆ ಲಸಿಕೆ ತೆಗೆದುಕೊಳ್ಳದೇ ಇರುವುದು ಸೋಂಕು ಉಲ್ಬಣಕ್ಕೆ ಕಾರಣವಾಗಿದೆ ಎಂದು ಹೇಳಿದೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯಬೇಕು. ೩ನೇ ಡೋಸ್ ಲಸಿಕೆ ಪಡೆಯಲು ಅರ್ಹರಾದವರು ಅದನ್ನು ಪಡೆದುಕೊಳ್ಳಬೇಕು. ಹೆಚ್ಚಿನ ರಕ್ಷಣೆ ಪಡೆದುಕೊಳ್ಳಬೇಕು. ಮಾಧ್ಯಮಗಳು ಕೂಡ ಲಸಿಕಕರಣ, ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು. ದಕ್ಷಿಣ ಕೊರಿಯಾ, ಥೈಲೆಂಡ್ ಮತ್ತು ಜಪಾನ್ ದೇಶಗಳಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಆ ದೇಶಗಳಿಂದ ಬರುವವರ ಬಗ್ಗೆ ವಿಮಾನ ನಿಲ್ದಾಣಗಳಲ್ಲಿ ನಿಗಾ ಇರಿಸಲಾಗಿದೆ. ಅವರ ಸಂಪರ್ಕಿತರ ಬಗ್ಗೆ ಹಾಗೂ ಪ್ರಯಾಣ ಮಾಡಿದವರ ಬಗ್ಗೆ ಟ್ರಾ÷್ಯಕ್ ಮಾಡಲಾಗುತ್ತಿದೆ. ಟೆಲಿ ಮಾನಿಟರಿಂಗ್ ಕೂಡ ಮಾಡಲಾಗುತ್ತಿದೆ ಎಂದು ಹೇಳಿದರು.

Translate »